ಪ್ರಧಾನ ಮಂತ್ರಿಯವರ ಕಛೇರಿ

ಇಡುಕ್ಕಿಯ ರಾಜಮಲೈನಲ್ಲಿನ ಭೂಕುಸಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪ್ರಧಾನಮಂತ್ರಿ ಸಂತಾಪ; ಸಂತ್ರಸ್ತರಿಗೆ ಪರಿಹಾರ ಘೋಷಣೆ

प्रविष्टि तिथि: 07 AUG 2020 7:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಡುಕ್ಕಿಯ ರಾಜಮಲೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು, ತಮ್ಮ ಟ್ವೀಟ್ ಸಂದೇಶದಲ್ಲಿ “ಇಡುಕ್ಕಿಯ ರಾಜಮಲೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಗೀಡಾಗಿರುವ ಘಟನೆ ನನಗೆ ನೋವುಂಟು ಮಾಡಿದೆ. ಈ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಎನ್ ಡಿ ಆರ್ ಎಫ್ ಮತ್ತು ಆಡಳಿತ ಘಟನಾ ಸ್ಥಳದಲ್ಲಿ ತೊಂದರೆಗೆ ಸಿಲುಕಿರುವವರಿಗೆ ನೆರವಾಗಲು ಕಾರ್ಯೋನ್ಮುಖವಾಗಿವೆ” ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು, ಪಿಎಂಎನ್ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಭೂಕುಸಿತದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ.

 


(रिलीज़ आईडी: 1644726) आगंतुक पटल : 216
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam