ಪ್ರಧಾನ ಮಂತ್ರಿಯವರ ಕಛೇರಿ

ವಿಜಯವಾಡ ಕೋವಿಡ್ ಕೇಂದ್ರದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಕಂಬನಿ

प्रविष्टि तिथि: 09 AUG 2020 10:14AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜಯವಾಡದ ಕೋವಿಡ್ ಕೇಂದ್ರದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಸಂದೇಶದಲ್ಲಿ “ವಿಜಯವಾಡದ ಕೋವಿಡ್ ಕೇಂದ್ರದಲ್ಲಿ ನಡೆದ ಅಗ್ನಿ ಆಕಸ್ಮಿಕದಿಂದ ದಿಗ್ಭ್ರಾಂತನಾಗಿದ್ದೇನೆ. ಘಟನೆಯಲ್ಲಿ ಮೃತ ಕುಟುಂಬದವರಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಪರಿಸ್ಥಿತಿಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಜಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಮತ್ತು ಸಾಧ್ಯವಾದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ” ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ.

 

 


(रिलीज़ आईडी: 1644813) आगंतुक पटल : 205
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam