ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ರಾಯಗಢದಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
25 AUG 2020 10:28AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ರಾಯಗಢದ ಮಹಾಡ್ ನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
"ಮಹಾರಾಷ್ಟ್ರದ ರಾಯಗಢದ ಮಹಾಡ್ ನಲ್ಲಿ ಸಂಭವಿಸಿದ ಕಟ್ಟಡ ಕುಸಿತದಿಂದ ದುಃಖಿತನಾಗಿದ್ದೇನೆ. ತಮ್ಮ ಆಪ್ತೇಷ್ಟರನ್ನು ಕಳೆದುಕೊಂಡವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಪ್ರಾಧಿಕಾರಗಳು ಮತ್ತು ಎನ್.ಡಿ.ಆರ್.ಎಫ್. ತಂಡಗಳು ದುರಂತದ ಸ್ಥಳದಲ್ಲಿದ್ದು, ಎಲ್ಲ ರೀತಿಯ ನೆರವು ಒದಗಿಸುತ್ತಿವೆ." ಎಂದು ಪ್ರಧಾನಿ ತಿಳಿಸಿದ್ದಾರೆ.
***
(Release ID: 1648422)
Visitor Counter : 196
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam