ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ -ಜನ ಧನ್ ಯೋಜನೆ 6 ವರ್ಷಗಳ ಯಶಸ್ವಿ ಪೂರೈಕೆ: ಪ್ರಧಾನಿ ಸಂತಸ

प्रविष्टि तिथि: 28 AUG 2020 11:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ ಧನ್ ಯೋಜನೆ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಪಿಎಂ-ಜೆಡಿವೈ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನೂ ಅವರು ಶ್ಲಾಘಿಸಿದರು.

ಟ್ವೀಟ್ ಸಂದೇಶದಲ್ಲಿ ಪ್ರಧಾನಿ ಅವರು, “ಬ್ಯಾಂಕಿಂಗ್ ನಿಂದ ಹೊರಗುಳಿದವರನ್ನು ಬ್ಯಾಂಕಿಂಗ್  ವ್ಯವಸ್ಥೆಗೆ ತರುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಇಂದಿಗೆ ಆರು ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಜನಧನ್ ಯೋಜನೆಯನ್ನು ಪ್ರಾರಂಭಿಸಲಾಯಿತು. ಉಪಕ್ರಮವು ಮಹತ್ವದ ಬದಲಾವಣೆ ತಂದಿದ್ದು, ಅನೇಕ ಬಡತನ ನಿರ್ಮೂಲನಾ ಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತಿದೆ, ಕೋಟ್ಯಂತರ ಜನರಿಗೆ ಪ್ರಯೋಜನವಾಗಿದೆ.”

ಹಲವಾರು ಕುಟುಂಬಗಳ ಭವಿಷ್ಯವನ್ನು ಸುರಕ್ಷಿತಗೊಳಿಸಿದ ಪ್ರಧಾನ ಮಂತ್ರಿ ಜನಧನ್ ಯೋಜನೆಗೆ ಧನ್ಯವಾದಗಳು. ಯೋಜನೆಯ ಬಹುತೇಕ ಫಲಾನುಭವಿಗಳು ಗ್ರಾಮೀಣ ಪ್ರದೇಶದವರು ಮತ್ತು ಮಹಿಳೆಯರು. ಪಿಎಂ-ಜೆಡಿವೈ ಯಶಸ್ಸಿಗಾಗಿ ದಣಿವರಿಯದೆ ಕೆಲಸ ಮಾಡಿದ ಎಲ್ಲರಿಗೂ ನನ್ನ ಮೆಚ್ಚುಗೆಗಳು.ಎಂದು ತಿಳಿಸಿದ್ದಾರೆ.

***


(रिलीज़ आईडी: 1649160) आगंतुक पटल : 252
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam