ಪ್ರಧಾನ ಮಂತ್ರಿಯವರ ಕಛೇರಿ

ರಾಣಿ ಲಕ್ಷ್ಮಿ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತ ಕಟ್ಟಡಗಳ ಉದ್ಘಾಟನೆ ಮಾಡಲಿರುವ ಪ್ರಧಾನಿ

प्रविष्टि तिथि: 28 AUG 2020 8:30PM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತ ಕಟ್ಟಡಗಳನ್ನು ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಝಾನ್ಸಿಯಲ್ಲಿರುವ ರಾಣಿ ಲಕ್ಷ್ಮಿ ಬಾಯಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ, ಬುಂದೇಲ್ಖಂಡ್ ಪ್ರದೇಶದ ಪ್ರಮುಖ ಸಂಸ್ಥೆಯಾಗಿದೆ.

ವಿಶ್ವವಿದ್ಯಾನಿಲಯವು ತನ್ನ ಮೊದಲ ಶೈಕ್ಷಣಿಕ ವರ್ಷವನ್ನು 2014-15ರಲ್ಲಿ ಪ್ರಾರಂಭಿಸಿತು. ಇದು ಕೃಷಿ, ತೋಟಗಾರಿಕೆ ಮತ್ತು ಅರಣ್ಯಶಾಸ್ತ್ರದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳನ್ನು ನೀಡುತ್ತಿದೆ.

ಇದು ಪ್ರಸ್ತುತ ಝಾನ್ಸಿಯ  ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆಯಿಂದ ಕಾರ್ಯನಿರ್ವಹಿಸುತ್ತಿದೆ.

ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಶ್ವವಿದ್ಯಾಲಯದ ವಿವಿಧ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

***


(रिलीज़ आईडी: 1649501) आगंतुक पटल : 227
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam