ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾಪಟುಗಳಿಗೆ ಪ್ರಧಾನಿ ಶುಭಾಶಯ; ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಕೆ

Posted On: 29 AUG 2020 10:37AM by PIB Bengaluru

ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ಅವರು ಭಾರತದ ಖ್ಯಾತ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

"ರಾಷ್ಟ್ರೀಯ ಕ್ರೀಡಾ ದಿನವು ವಿವಿಧ ಕ್ರೀಡೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಮತ್ತು ನಮ್ಮ ರಾಷ್ಟ್ರಕ್ಕೆ  ಹೆಮ್ಮೆ ತಂದುಕೊಟ್ಟ ಕ್ರೀಡಾಪಟುಗಳ ಅದ್ಭುತ ಸಾಧನೆಗಳನ್ನು ಆಚರಿಸುವ ದಿನವಾಗಿದೆ. ಅವರ ಪರಿಶ್ರಮ ಮತ್ತು ದೃಢತೆಯು ಅತ್ಯುತ್ತಮವಾದುದುಎಂದು ಪ್ರಧಾನಿಯವರು ಹೇಳಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನವಾದ ಇಂದು, ನಾವು ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸುತ್ತೇವೆ, ಹಾಕಿ ಸ್ಟಿಕ್ನೊಂದಿಗೆ ಅವರ ಮಾಟಗಾರಿಕೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ.

ನಮ್ಮ ಪ್ರತಿಭಾವಂತ ಕ್ರೀಡಾಪಟುಗಳ ಯಶಸ್ಸಿಗೆ ಅವರ ಕುಟುಂಬಗಳು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿ ನೀಡಿದ ಅತ್ಯುತ್ತಮ ಬೆಂಬಲವನ್ನು ಶ್ಲಾಘಿಸುವ ದಿನವೂ ಇದಾಗಿದೆ.

ಭಾರತದಲ್ಲಿ ಕ್ರೀಡೆಗಳನ್ನು ಜನಪ್ರಿಯಗೊಳಿಸಲು ಮತ್ತು ಕ್ರೀಡಾ ಪ್ರತಿಭೆಗಳನ್ನು ಬೆಂಬಲಿಸಲು ಸರ್ಕಾರ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. ಇದೇ ಸಂದರ್ಭದಲ್ಲಿ, ಪ್ರತಿಯೊಬ್ಬರೂ ಕ್ರೀಡೆ ಮತ್ತು ಸದೃಢತೆಯ ವ್ಯಾಯಾಮವನ್ನು ತಮ್ಮ ದೈನಂದಿನ ದಿನಚರಿಯ ಭಾಗವಾಗಿಸಿಕೊಳ್ಳುವಂತೆ ವಿನಂತಿಸುತ್ತೇನೆ. ಹಾಗೆ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಎಲ್ಲರೂ ಸಂತೋಷದಿಂದ ಆರೋಗ್ಯದಿಂದ ಇರಲಿ! " ಎಂದು ಪ್ರಧಾನಿ ತಿಳಿಸಿದ್ದಾರೆ.

***



(Release ID: 1649503) Visitor Counter : 225