ರಕ್ಷಣಾ ಸಚಿವಾಲಯ

ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್

Posted On: 31 AUG 2020 8:18PM by PIB Bengaluru

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ರಕ್ಷಣಾ ಸಚಿವ ಶ್ರೀ ರಾಜನಾಥ ಸಿಂಗ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಸಂದೇಶದಲ್ಲಿ ಅವರು, ‘ಸಮಾಜದ ಎಲ್ಲ ವರ್ಗದಿಂದ ಅವರು ವ್ಯಾಪಕವಾಗಿ ಗೌರವಕ್ಕೆ ಪಾತ್ರರಾಗಿದ್ದರು. ಅವರ ನಿಧನದಿಂದ ವೈಯಕ್ತಿಕ ನಷ್ಟವಾಗಿದೆ. ಅವರು ಭಾರತದ ಇತಿಹಾಸ, ರಾಜತಾಂತ್ರಿಕತೆ, ಸಾರ್ವಜನಿಕ ನೀತಿ ಮತ್ತು ರಕ್ಷಣೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು

ಅವರ ವ್ಯಕ್ತಿತ್ವ ಸ್ಮರಿಸಿರುವ ಶ್ರೀ ಸಿಂಗ್ಪ್ರಣಬ್ ದಾ ಅವರು ಸರಳತೆ, ಪ್ರಾಮಾಣಿಕತೆ ಮತ್ತು ವ್ಯಕ್ತಿತ್ವದ ಬಲಕ್ಕೆ ಉದಾಹರಣೆಯಾಗಿದ್ದರು. ಅವರು ಶ್ರದ್ಧೆ ಮತ್ತು ಸಮರ್ಪಣೆಯೊಂದಿಗೆ ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದರು. ಸಾರ್ವಜನಿಕ ಜೀವನಕ್ಕೆ ಅವರು ನೀಡಿದ ಕೊಡುಗೆ ಅಮೂಲ್ಯವಾದುದು.ಎಂದು ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬಕ್ಕೆ ರಕ್ಷಣಾ ಸಚಿವರು ಸಂತಾಪ ಸೂಚಿಸಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರು ನವದೆಹಲಿಯಲ್ಲಿ ಆಗಸ್ಟ್ 31, ಇಂದು ಕೊನೆಯುಸಿರೆಳೆದಿದ್ದಾರೆ. 2004-06ರವರೆಗೆ ರಕ್ಷಣಾ ಸಚಿವರಾಗಿದ್ದೂ ಸೇರಿದಂತೆ ವಿವಿಧ ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಅವರು ಹಿರಿಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

***(Release ID: 1650195) Visitor Counter : 110