ಪ್ರಧಾನ ಮಂತ್ರಿಯವರ ಕಛೇರಿ
ಕೇದಾರನಾಥ ಧಾಮ ಅಭಿವೃದ್ಧಿ ಕಾಮಗಾರಿಗಳ ಪರಾಮರ್ಶೆ ನಡೆಸಿದ ಪ್ರಧಾನಿ
Posted On:
09 SEP 2020 6:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೇದಾರನಾಥ ಧಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಪರಾಮರ್ಶೆ ನಡೆಸಿದರು. ಕೇದಾರನಾಥಕ್ಕೆ ಹೆಚ್ಚಿನ ಭಕ್ತಾಧಿಗಳು ಮತ್ತು ಪ್ರವಾಸಿಗರ ಭೇಟಿಗೆ ಅನುಕೂಲವಾಗುವಂತೆ ಅಲ್ಲಿ ಮೂಲಸೌಕರ್ಯ ವೃದ್ಧಿ ಅಂಶವೂ ಪರಾಮರ್ಶೆಯಲ್ಲಿ ಸೇರಿತ್ತು.
ಕೇದಾರನಾಥದಲ್ಲಿ ಯಾತ್ರಾರ್ಥಿಗಳ ಸ್ನೇಹಿ ಮತ್ತು ಪರಿಸರ ಸ್ನೇಹಿ ಸೌಕರ್ಯಗಳನ್ನು ವೃದ್ಧಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು. ಕೇದಾರನಾಥ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳ ಭಾಗವಾಗಿ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
***
(Release ID: 1652798)
Visitor Counter : 152
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam