ಪ್ರಧಾನ ಮಂತ್ರಿಯವರ ಕಛೇರಿ

ಕೃಷಿ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರವಾಗಿದ್ದಕ್ಕೆ ರೈತರಿಗೆ ಶುಭ ಕೋರಿದ ಪ್ರಧಾನಿ

Posted On: 20 SEP 2020 4:10PM by PIB Bengaluru

ಸಂಸತ್ತಿನಲ್ಲಿ ಕೃಷಿ ಮಸೂದೆಗಳು ಅಂಗೀಕಾರವಾಗಿರುವುದಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ಶುಭ ಹಾರೈಸಿದ್ದಾರೆ. ಭಾರತದ ಕೃಷಿಕ್ಷೇತ್ರದ ಇತಿಹಾಸದಲ್ಲಿ ಇದೊಂದು ಅಮೂಲ್ಯವಾದ ಕ್ಷಣ ಎಂದು ಅವರು ಹೇಳಿದ್ದಾರೆ.
ಈ ಕುರಿತು ಪ್ರಧಾನಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ. "ಭಾರತದ ಕೃಷಿ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ಅಮೂಲ್ಯವಾದ ಕ್ಷಣ! ಸಂಸತ್ತಿನಲ್ಲಿ ಪ್ರಮುಖ ಮಸೂದೆಗಳನ್ನು ಅಂಗೀಕಾರವಾಗಿರುವುದಕ್ಕೆ ನಮ್ಮ ರೈತರಿಗೆ ಅಭಿನಂದನೆಗಳು. ಇದು ಕೃಷಿ ಕ್ಷೇತ್ರದಲ್ಲಿ ಸಂಪೂರ್ಣ ಪರಿವರ್ತನೆಯನ್ನು ಖಚಿತಪಡಿಸುತ್ತದೆ ಮತ್ತು ಕೋಟ್ಯಂತರ ರೈತರನ್ನು ಸಬಲೀಕರಣಗೊಳಿಸುತ್ತದೆ.
ದಶಕಗಳಿಂದ, ಭಾರತದ ರೈತ ಹಲವಾರು ನಿರ್ಬಂಧಗಳಿಂದ ಬಂಧಿಸಲ್ಪಟ್ಟಿದ್ದ ಮತ್ತು ಮಧ್ಯವರ್ತಿಗಳಿಂದ ಬೆದರಿಸಲ್ಪಟ್ಟಿದ್ದ. ಸಂಸತ್ತು ಅಂಗೀಕರಿಸಿರುವ  ಮಸೂದೆಗಳು ರೈತರನ್ನು ಇಂತಹ ಸಂಕೋಲೆಗಳಿಂದ ಮುಕ್ತಗೊಳಿಸುತ್ತವೆ. ಈ ಮಸೂದೆಗಳು ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಮತ್ತು ಅವರಿಗೆ ಹೆಚ್ಚಿನ ಸಮೃದ್ಧಿಯನ್ನು ನೀಡುವ ಪ್ರಯತ್ನಗಳಿಗೆ ಉತ್ತೇಜನ ನೀಡುತ್ತವೆ.
ನಮ್ಮ ಕೃಷಿ ಕ್ಷೇತ್ರಕ್ಕೆ ಪರಿಶ್ರಮಪಡುವ ರೈತರಿಗೆ ಸಹಾಯ ಮಾಡುವ ಇತ್ತೀಚಿನ ತಂತ್ರಜ್ಞಾನದ ಅಗತ್ಯವಿದೆ. ಈಗ, ಮಸೂದೆಗಳ ಅಂಗೀಕಾರದೊಂದಿಗೆ, ನಮ್ಮ ರೈತರು ಭವಿಷ್ಯದ ತಂತ್ರಜ್ಞಾನಕ್ಕೆ ಸುಲಭ ಪ್ರವೇಶವನ್ನು ಪಡೆಯುವುದರಿಂದ, ಉತ್ಪಾದನೆ ಹೆಚ್ಚುತ್ತದೆ ಮತ್ತು ಉತ್ತಮ ಫಲಿತಾಂಶವನ್ನು ನೀಡುತ್ತದೆ. ಇದು ಸ್ವಾಗತಾರ್ಹ ಹೆಜ್ಜೆಯಾಗಿದೆ.
ನಾನು ಇದನ್ನು ಮೊದಲೇ ಹೇಳಿದ್ದೇನೆ, ಈಗ ಮತ್ತೊಮ್ಮೆ ಹೇಳುತ್ತೇನೆ:
ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರೆಯುತ್ತದೆ. ಸರ್ಕಾರದ ಖರೀದಿಯೂ ಮುಂದುವರಿಯುತ್ತದೆ. ನಮ್ಮ ರೈತರಿಗೆ ಸೇವೆ ಸಲ್ಲಿಸಲು ನಾವು ಇಲ್ಲಿದ್ದೇವೆ. ಅವರಿಗೆ ಬೆಂಬಲ ನೀಡಲು ಮತ್ತು ಅವರ ಮುಂದಿನ ಪೀಳಿಗೆಯ ಉತ್ತಮ ಜೀವನವನ್ನು ಖಾತ್ರಿಪಡಿಸಿಕೊಳ್ಳಲು ನಾವು ಸಾಧ್ಯವಾದದ್ದೆಲ್ಲವನ್ನೂ ಮಾಡುತ್ತೇವೆ." ಎಂದು ಪ್ರಧಾನಿಯವರು ಹೇಳಿದ್ದಾರೆ.

***



(Release ID: 1657013) Visitor Counter : 205