ಪ್ರಧಾನ ಮಂತ್ರಿಯವರ ಕಛೇರಿ
ಭಾರತ ಮತ್ತು ಶ್ರೀಲಂಕಾ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆ
Posted On:
24 SEP 2020 12:18PM by PIB Bengaluru
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಶ್ರೀಲಂಕಾದ ಪ್ರಧಾನಿ ಶ್ರೀ ಮಹಿಂದಾ ರಾಜಪಕ್ಸೆ ಅವರು ಸೆಪ್ಟೆಂಬರ್ 26, 2020 ರಂದು ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯನ್ನು ನಡೆಸಲಿದ್ದಾರೆ.
ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಸಂಸತ್ ಚುನಾವಣೆಯ ನಂತರ ಮತ್ತು ಉಭಯ ದೇಶಗಳ ನಡುವಿನ ಬಹುಕಾಲದ ಸ್ನೇಹ ಸಂಬಂಧಗಳ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರವಾಗಿ ಪರಿಶೀಲಿಸಲು ಈ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯು ಉಭಯ ನಾಯಕರಿಗೆ ಅವಕಾಶ ಮಾಡಿಕೊಡುತ್ತದೆ.
ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಶ್ರೀ ನರೇಂದ್ರ ಮೋದಿಯವರು "ದ್ವಿಪಕ್ಷೀಯ ಸಂಬಂಧವನ್ನು ಜಂಟಿಯಾಗಿ ಸಮಗ್ರವಾಗಿ ಪರಿಶೀಲಿಸಲು ಎದುರು ನೋಡುತ್ತಿದ್ದೇನೆ" ಎಂದು ಹೇಳಿದ್ದಾರೆ.
"ಕೋವಿಡ್ ನಂತರದ ಯುಗದಲ್ಲಿ ನಮ್ಮ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಮಾರ್ಗಗಳನ್ನು ನಾವು ಕಂಡುಕೊಳ್ಳಬೇಕು" ಎಂದು ಅವರು ಹೇಳಿದ್ದಾರೆ.
***
(Release ID: 1658592)
Visitor Counter : 261
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam