ವಾರ್ತಾ ಮತ್ತು ಪ್ರಸಾರ ಸಚಿವಾಲಯ

51ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕುರಿತು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಅವರ ಪತ್ರಿಕಾ ಹೇಳಿಕೆ

Posted On: 24 SEP 2020 2:03PM by PIB Bengaluru

ಗೋವಾದಲ್ಲಿ 2020ರ ನವೆಂಬರ್ 20ರಿಂದ 28ರ ವರೆಗೆ ನಡೆಸಲು ಉದ್ದೇಶಿಸಿದ್ದ 51ನೇ ಆವೃತ್ತಿಯ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2021ರ ಜನವರಿ 16 ರಿಂದ 24ಕ್ಕೆ ಮುಂದೂಡಲಾಗಿದೆ. ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರೊಂದಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಶ್ರೀ ಪ್ರಕಾಶ್ ಜಾವಡೇಕರ್ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಮಾರ್ಗಸೂಚಿ ಹಾಗೂ ಶಿಷ್ಟಾಚಾರಗಳ ಪ್ರಕಾರ 2021ರ ಜನವರಿ 16ರಿಂದ 24ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಡೆಸಲು ಜಂಟಿಯಾಗಿ ನಿರ್ಧರಿಸಲಾಗಿದೆ. ಈ ಚಲನಚಿತ್ರೋತ್ಸವವನ್ನು ಹೈಬ್ರಿಡ್ ಮಾದರಿಯಲ್ಲಿ ಅಂದರೆ ವರ್ಚುಯಲ್ ಮತ್ತು ಭೌತಿಕ ರೂಪದಲ್ಲಿ ನಡೆಸಲಾಗುವುದು. ಕೋವಿಡ್ ಸಂಬಂಧಿಸಿದ ಎಲ್ಲ ಮಾರ್ಗಸೂಚಿಗಳನ್ನು ಹಾಗೂ ಇತ್ತೀಚೆಗೆ ಮುಕ್ತಾಯಗೊಂಡ ಚಲನಚಿತ್ರೋತ್ಸವಗಳಲ್ಲಿ ಜಾರಿಗೊಳಿಸಿರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.

***



(Release ID: 1658691) Visitor Counter : 178