ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸುಗಾ ಯೋಶಿಹಿಡೆ ನಡುವೆ ದೂರವಾಣಿ ಸಂಭಾಷಣೆ
Posted On:
25 SEP 2020 2:09PM by PIB Bengaluru
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸುಗಾ ಯೊಶೋಹಿಡೆ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಪ್ರಧಾನಿಯವರು, ಜಪಾನ್ ನ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಸುಗಾ ಅವರನ್ನು ಅಭಿನಂದಿಸಿ, ಗುರಿ ಸಾಧನೆಗೆ ಯಶಸ್ಸು ಕೋರಿದರು.
ಇಬ್ಬರೂ ನಾಯಕರು ಭಾರತ- ಜಪಾನ್ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಸಹಯೋಗವು ಕಳೆದ ಕೆಲವು ವರ್ಷಗಳಲ್ಲಿ ತುಂಬಾ ಮುಂದುವರಿದಿದೆ ಎಂಬುದನ್ನು ಒಪ್ಪಿಕೊಂಡರು ಮತ್ತು ಪರಸ್ಪರ ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಆಧಾರದಲ್ಲಿ ಅದನ್ನು ಮತ್ತಷ್ಟು ಬಲಪಡಿಸುವ ಇರಾದೆಯನ್ನು ವ್ಯಕ್ತಪಡಿಸಿದರು.
ಇಬ್ಬರೂ ನಾಯಕರು ಕೋವಿಡ್-19 ಸಾಂಕ್ರಾಮಿಕ ರೋಗ ಸೇರಿದಂತೆ ಜಾಗತಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಇಂದಿನ ಸಮಯದಲ್ಲಿ ಉಭಯ ದೇಶಗಳ ಸಹಭಾಗಿತ್ವವು ಹೆಚ್ಚು ಪ್ರಸ್ತುತವಾಗಿದೆ ಎಂಬುದನ್ನು ಒಪ್ಪಿಕೊಂಡರು. ಮುಕ್ತ ಮತ್ತು ಅಂತರ್ಗತ ಭಾರತ -ಪೆಸಿಫಿಕ್ ಪ್ರದೇಶದ ಆರ್ಥಿಕ ಸ್ವರೂಪವು ಸ್ಥಿರ ಪೂರೈಕೆ ಸರಪಳಿಗಳ ಮೇಲೆ ಪ್ರದರ್ಶಿತವಾಗಬೇಕು ಎಂದು ಪ್ರತಿಪಾದಿಸಿದರು, ಈ ನಿಟ್ಟಿನಲ್ಲಿ ಭಾರತ, ಜಪಾನ್ ಮತ್ತು ಇತರ ಸಮಾನ ಮನಸ್ಕ ದೇಶಗಳ ನಡುವಿನ ಸಹಕಾರವನ್ನು ಅವರು ಸ್ವಾಗತಿಸಿದರು.
ಇಬ್ಬರೂ ನಾಯಕರು ಎರಡೂ ದೇಶಗಳ ನಡುವಿನ ಆರ್ಥಿಕ ಸಹಯೋಗದ ಪ್ರಗತಿಯನ್ನು ಶ್ಲಾಘಿಸಿದರು ಮತ್ತು ಈ ನಿಟ್ಟಿನಲ್ಲಿ ವಿಶೇಷ ಕೌಶಲ ಕಾರ್ಮಿಕರಿಗೆ ಸಂಬಂಧಿಸಿದ ಒಪ್ಪಂದದ ಕರಡು ಆಖೈರು ಮಾಡಿರುವುದನ್ನು ಸ್ವಾಗತಿಸಿದರು.
ಪ್ರಧಾನಿಯವರು ಕೋವಿಡ್ -19 ಸಾಂಕ್ರಾಮಿಕದಿಂದ ಉದ್ಭವಿಸಿರುವ ಜಾಗತಿಕ ಪರಿಸ್ಥಿತಿ ಸುಧಾರಿಸದ ತರುವಾಯ ಜಪಾನ್ ಪ್ರಧಾನಿ ಸುಗಾ ಅವರಿಗೆ ವಾರ್ಷಿಕ ದ್ವಿಪಕ್ಷೀಯ ಶೃಂಗಕ್ಕಾಗಿ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
***
(Release ID: 1658977)
Visitor Counter : 226
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam