ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ದೂರವಾಣಿ ಮಾತುಕತೆ

Posted On: 05 OCT 2020 8:00PM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಿ ಶ್ರೀ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು. 
ಪ್ರಧಾನಿ ಮೋದಿಯವರು ಯಹೂದಿ ಹೊಸ ವರ್ಷ ಮತ್ತು ಯಹೂದಿಗಳ ಹಬ್ಬ ಸುಕ್ಕೋತ್ ಗೆ ಪ್ರಧಾನಿ ನೆತನ್ಯಾಹು ಮತ್ತು ಇಸ್ರೇಲ್ ಜನತೆಗೆ ಶುಭಾಶಯಗಳನ್ನು ತಿಳಿಸಿದರು.
ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ, ವಿಶೇಷವಾಗಿ ಸಂಶೋಧನಾ ಕ್ಷೇತ್ರಗಳಲ್ಲಿ, ರೋಗನಿರ್ಣಯ ಸಾಧನಗಳ ಪ್ರಯೋಗಗಳು ಮತ್ತು ಲಸಿಕೆ ಅಭಿವೃದ್ಧಿಯಲ್ಲಿ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು ಇಬ್ಬರೂ ನಾಯಕರು ಚರ್ಚಿಸಿದರು. ಈ ಪ್ರಮುಖ ಕ್ಷೇತ್ರಗಳಲ್ಲಿ ನಿಕಟ ಸಹಕಾರವು ಎರಡು ದೇಶಗಳ ಜನತೆಯ ಅನುಕೂಲಕ್ಕಾಗಿ ಮಾತ್ರವಲ್ಲದೆ ಇಡೀ ಮಾನವಕುಲದ ಒಳಿತಿಗೆ ಮಹತ್ವದ್ದಾಗಿದೆ ಎಂಬುದನ್ನು ಅವರು ಒಪ್ಪಿದರು.
ನೀರು ಮತ್ತು ಕೃಷಿ, ಆರೋಗ್ಯ, ವ್ಯಾಪಾರ, ಮತ್ತು ಸ್ಟಾರ್ಟ್ ಅಪ್ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಸಹಕಾರವನ್ನು ಅವರು ಪರಿಶೀಲಿಸಿದರು ಮತ್ತು ಈ ಸಂಬಂಧಗಳನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆ ಚರ್ಚಿಸಿದರು.
ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳು ಮತ್ತು ಅವಕಾಶಗಳ ಬಗೆಗಿನ ಮೌಲ್ಯಮಾಪನಗಳನ್ನು ಹಂಚಿಕೊಳ್ಳಲು ಮತ್ತು ನಿಕಟ ಹಾಗೂ ದೃಢವಾದ ದ್ವಿಪಕ್ಷೀಯ ಕಾರ್ಯತಂತ್ರದ ಸಹಭಾಗಿತ್ವವನ್ನು ವೃದ್ಧಿಸಲು ನಿಯಮಿತವಾಗಿ ಸಮಾಲೋಚನೆಗಳನ್ನು ಮುಂದುವರಿಸಲು ನಾಯಕರು ಒಪ್ಪಿಕೊಂಡರು. 

***(Release ID: 1662000) Visitor Counter : 205