ಪ್ರಧಾನ ಮಂತ್ರಿಯವರ ಕಛೇರಿ

ಆಫ್ಗಾನಿಸ್ತಾನದ ರಾಷ್ಟ್ರೀಯ ರಾಜೀಸಂಧಾನದ ಉನ್ನತ ಮಂಡಳಿಯ ಅಧ್ಯಕ್ಷ ಡಾ. ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ಪ್ರಧಾನಿ

Posted On: 08 OCT 2020 1:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಫ್ಗಾನಿಸ್ತಾನದ ರಾಷ್ಟ್ರೀಯ ರಾಜೀ ಸಂಧಾನದ ಉನ್ನತ ಮಂಡಳಿಯ ಅಧ್ಯಕ್ಷ ಡಾ. ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ್ದರು. ಸರ್ಕಾರದ ನೆರೆಹೊರೆ ಮೊದಲು ನೀತಿಗೆ ಅನುಗುಣವಾಗಿ ಪ್ರಧಾನಮಂತ್ರಿ ಅವರು, ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ಐತಿಹಾಸಿಕ ಸಂಬಂಧಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಭಾರತದ ದೀರ್ಘಾವಧಿಯ ಬದ್ಧತೆಯನ್ನು ಪುನರುಚ್ಚರಿಸಿದರು. ಉಭಯ ನಾಯಕರು ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಹಿತಾಸಕ್ತಿಯ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಡಾ.ಅಬ್ದುಲ್ಲಾ ಅಬ್ದುಲ್ಲಾ ಅವರು, ಪ್ರಧಾನಮಂತ್ರಿ ಅವರಿಗೆ ಆಫ್ಘನ್ ಶಾಂತಿ ಪ್ರಕ್ರಿಯೆ ಮತ್ತು ದೋಹಾದಲ್ಲಿ ಪ್ರಸ್ತುತ ನಡೆಯುತ್ತಿರುವ ಮಾತುಕತೆಗಳ ವಿವರಗಳನ್ನು ನೀಡಿದರು.

ಅಫ್ಘಾನಿಸ್ತಾನದೊಂದಿಗಿನ ಭಾರತದ ಅಭಿವೃದ್ಧಿ ಸಹಕಾರ ಸೇರಿದಂತೆ ದ್ವಿಪಕ್ಷೀಯ ವಿಷಯಗಳ ಕುರಿತು ಅವರು ಚರ್ಚೆ ನಡೆಸಿದರು.

ಭಾರತದ 3 ಬಿಲಿಯನ್ ಡಾಲರ್ ಅಮೆರಿಕನ್ ಡಾಲರ್ ನೆರವಿನ ಆರ್ಥಿಕ ಬದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಅಬ್ದುಲ್ಲಾ ಅಬ್ದುಲ್ಲಾ, ಅದರಡಿ ಕೈಗೊಂಡಿರುವ ಯೋಜನೆಗಳಿಂದ ಅಫ್ಘಾನಿಸ್ತಾನದಾದ್ಯಂತ ಇರುವ 34 ಪ್ರಾಂತ್ಯಗಳಳಿಗೆ ಪ್ರಯೋಜನವಾಗಿದೆ ಎಂದರು.

ಅಫ್ಘಾನಿಸ್ತಾನದಲ್ಲಿ ಸುಸ್ಥಿರ ಶಾಂತಿ ಮತ್ತು ಸಮೃದ್ಧಿ ನಿಟ್ಟಿನಲ್ಲಿ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ, ಅಫ್ಘಾನಿಸ್ತಾನದಲ್ಲಿ ಖಾಯಂ ಕದನ ವಿರಾಮ ಮತ್ತು ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿರುವುದನ್ನು ಸ್ವಾಗತಿಸಿದರು.

ರಾಷ್ಟ್ರೀಯ ಭದ್ರತಾ ಸಲಹೆಗಾರ ಶ್ರೀ ಅಜಿತ್ ದೋವಲ್ ಅವರು ಅಕ್ಟೋಬರ್ 7ರಂದು ಡಾ.ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ಭೇಟಿ ಮಾಡಿ, ಅಫ್ಘಾನಿಸ್ತಾನದಾದ್ಯಂತ ಹೆಚ್ಚಾಗುತ್ತಿರುವ ಹಿಂಸಾಚಾರ ಮತ್ತು ಶಾಂತಿ ಹಾಗೂ ಭದ್ರತಾ ಸ್ಥಿತಿಗತಿ ಸೇರಿದಂತೆ ಅಫ್ಘಾನಿಸ್ತಾನದ ಶಾಂತಿ ಪ್ರಕ್ರಿಯೆ ಹಾಗೂ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿದರು.

ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ನಾಳೆ ಅಂದರೆ ಅಕ್ಟೋಬರ್ 9, 2020ರಂದು ಡಾ.ಅಬ್ದುಲ್ಲಾ ಅಬ್ದುಲ್ಲಾ ಅವರನ್ನು ಭೇಟಿ ಮಾಡಲಿದ್ದಾರೆ.

*** 



(Release ID: 1663057) Visitor Counter : 135