ಪ್ರಧಾನ ಮಂತ್ರಿಯವರ ಕಛೇರಿ

ತೆಲಂಗಾಣ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಮಾತುಕತೆ

Posted On: 14 OCT 2020 7:53PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣ ಮುಖ್ಯಮಂತ್ರಿ ಶ್ರೀ ಕೆ. ಚಂದ್ರಶೇಖರ ರಾವ್ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ. ಎಸ್. ಜಗನ್ಮೋಹನ ರೆಡ್ಡಿ ಅವರೊಂದಿಗೆ ಭಾರೀ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಮಾತುಕತೆ ನಡೆಸಿದರು.

"ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಗಾರು ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ. ಎಸ್. ಜಗನ್ ಗಾರು ಅವರೊಂದಿಗೆ ಅನುಕ್ರಮವಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಮತ್ತು ಸಹಾಯದ ಭರವಸೆ ನೀಡಿದ್ದೇನೆ. ಭಾರಿ ಮಳೆಯಿಂದ ಬಾಧಿತರಾಗಿರುವವರೊಂದಿಗಿದೆ ನನ್ನ ಸಂವೇದನೆ ಇದೆ"ಎಂದು ಪ್ರಧಾನಿ ತಿಳಿಸಿದ್ದಾರೆ.

***


(Release ID: 1664680) Visitor Counter : 186