ಪ್ರಧಾನ ಮಂತ್ರಿಯವರ ಕಛೇರಿ

ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಕರ್ನಾಟಕ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 OCT 2020 8:52PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು.
"ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಮಾತನಾಡಿದ್ದೇನೆ. ಬಾಧಿತರಾಗಿರುವ ಕರ್ನಾಟಕದ ಸಹೋದರಿ ಮತ್ತು ಸಹೋದರರೊಂದಿಗೆ ನಾವು ಒಟ್ಟಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾಮಗಾರಿಗಳಲ್ಲಿ ಕೇಂದ್ರದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡಿದ್ದೇನೆ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1665544) ವಿಸಿಟರ್ ಕೌಂಟರ್ : 181