ಪ್ರಧಾನ ಮಂತ್ರಿಯವರ ಕಛೇರಿ

ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ

Posted On: 16 OCT 2020 8:55PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿದರು.
"ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಮಾತನಾಡಿದ್ದೇನೆ. ಬಾಧಿತರಾಗಿರುವ ಸಹೋದರಿ ಮತ್ತು ಸಹೋದರರೊಂದಿಗೆ ನನ್ನ ಸಂವೇದನೆ ಮತ್ತು ಪ್ರಾರ್ಥನೆ ಇದೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾಮಗಾರಿಗಳಲ್ಲಿ ಕೇಂದ್ರದ ಬೆಂಬಲವನ್ನು ಪುನರುಚ್ಚರಿಸಿದ್ದೇನೆ ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***



(Release ID: 1665545) Visitor Counter : 110