ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಭಾರತದಲ್ಲಿ ಕ್ರಮೇಣ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ
22 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ 20 ಸಾವಿರಕ್ಕೂ ಕಡಿಮೆ ಸಕ್ರಿಯ ಪ್ರಕರಣ
Posted On:
18 OCT 2020 10:56AM by PIB Bengaluru
ಭಾರತದಲ್ಲಿ ಕ್ರಮೇಣ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವುದು ವರದಿಯಾಗಿದೆ. ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ ಇದೆ ಮತ್ತು ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 7,83,311. ದೇಶದಲ್ಲಿ ಸದ್ಯ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.10. 45 ರಷ್ಟು ಮಾತ್ರ.
ರಾಷ್ಟ್ರೀಯ ಟ್ರೆಂಡ್ ನಂತೆ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ 20ಸಾವಿರಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳಿವೆ.
13 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ 20ಸಾವಿರಕ್ಕೂ ಅಧಿಕ ಮತ್ತು 50 ಸಾವಿರಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳು, 3 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ 50ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳು.
ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ಗುಣಮುಖರಾಗುತ್ತಿರುವ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿವೆ. ಸದ್ಯ ಗುಣಮುಖವಾಗಿರುವ ಪ್ರಕರಣಗಳು 65,97,209. ಗುಣಮುಖರಾದವರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆಯ ನಡುವಿನ ಅಂತರ 58 ಲಕ್ಷ (58,13,898) ದಾಟಿದೆ. ಗುಣಮುಖರಾದವರ ರಾಷ್ಟ್ರೀಯ ಸರಾಸರಿ ಪ್ರಮಾಣ ಮತ್ತಷ್ಟು ಚೇತರಿಕೆ ಕಂಡು ಹಾಲಿ ಶೇ.88.03ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 72,614 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದರೆ, ಹೊಸದಾಗಿ 61,871 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಹೊಸದಾಗಿ ಸೋಂಕು ಪತ್ತೆಯಾಗಿರುವ ಪ್ರಕರಣಗಳಲ್ಲಿ ಶೇ.79 ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿವೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ ಗರಿಷ್ಠ ಸಂಖ್ಯೆಯ ಅಂದರೆ 14ಸಾವಿರಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ 61,871 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಶೇ.79 ರಷ್ಟು ಹೊಸ ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ಮಹಾರಾಷ್ಟ್ರದಲ್ಲಿ ಅತ್ಯಧಿಕ ಪ್ರಕರಣಗಳುಅಂದರೆ 10ಸಾವಿರಕ್ಕೂ ಅಧಿಕ ಪ್ರಕರಣಗಳು ದಿನವೊಂದಕ್ಕೆ ದಾಖಲಾಗಿವೆ, ಆನಂತರ ಕೇರಳದಲ್ಲಿ 9ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1033 ಮಂದಿ ಸಾವನ್ನಪ್ಪಿದ್ದಾರೆ.
ಆ ಪೈಕಿ 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.86ಕ್ಕೂ ಅಧಿಕ ಪ್ರಕರಣಗಳು, ಶೇ.44ಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳ ಸಾವು ಮಹಾರಾಷ್ಟ್ರದಲ್ಲಿ (463) ಸಂಭವಿಸಿವೆ.
***
(Release ID: 1665629)
Visitor Counter : 186
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam