ಪ್ರಧಾನ ಮಂತ್ರಿಯವರ ಕಛೇರಿ

ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

Posted On: 21 OCT 2020 11:43AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಇಂದು ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.

ಭಾರತದಾದ್ಯಂತ ಇರುವ ಎಲ್ಲ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುವ ದಿನ ಪೊಲೀಸ್ ಸಂಸ್ಮರಣಾ ದಿನವಾಗಿದೆ. ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಎಲ್ಲ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಸದಾ ಸ್ಮರಣೀಯ.

ಕಾನೂನು ಸುವ್ಯವಸ್ಥೆ ಪಾಲನೆ ಜೊತೆಗೆ ಭೀಕರ ಅಪರಾಧ ಕೃತ್ಯಗಳನ್ನು ಬೇಧಿಸುವುದರಿಂದ ಹಿಡಿದು, ಕೋವಿಡ್-19 ವಿರುದ್ಧ ಹೋರಾಟಕ್ಕೆ ವಿಪತ್ತು ನಿರ್ವಹಣೆಗೆ ಸಹಕಾರ ನೀಡುತ್ತಿರುವುದಲ್ಲದೆ, ನಮ್ಮ ಪೊಲೀಸ್ ಸಿಬ್ಬಂದಿ ಸದಾ ಯಾವುದೇ ಹಿಂಜರಿಕೆಯಿಲ್ಲದೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಪರಿಶ್ರಮ ಮತ್ತು ನಾಗರಿಕರಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿರುವ ಅವರ ಕಾರ್ಯ ನಮಗೆ ಹೆಮ್ಮೆ ಮೂಡಿಸುತ್ತದೆಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***



(Release ID: 1666432) Visitor Counter : 194