ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಭಾರತದಲ್ಲಿ ದಾಖಲೆಯ ಸೋಂಕು ಪತ್ತೆ ಪರೀಕ್ಷೆ
ಕಳೆದ 9 ದಿನಗಳಲ್ಲಿ 1 ಕೋಟಿ ಸೋಂಕು ಪತ್ತೆ ಪರೀಕ್ಷೆ
ಕಳೆದ ಆರು ವಾರಗಳಲ್ಲಿ ಪ್ರತಿದಿನ ಸರಾಸರಿ ಸುಮಾರು 11 ಲಕ್ಷ ಸೋಂಕು ಪತ್ತೆ ಪರೀಕ್ಷೆ
ಪರೀಕ್ಷೆಗಳ ಹೆಚ್ಚಳಿಕೆ ನಡುವೆ ಪಾಸಿಟಿವಿಟಿ ದರ ನಿರಂತರ ಕುಸಿತ
प्रविष्टि तिथि:
29 OCT 2020 1:38PM by PIB Bengaluru
ಭಾರತದಲ್ಲಿ ಕಳೆದ 2020ರ ಜನವರಿಯಿಂದೀಚೆಗೆ ಕೋವಿಡ್-19 ಪರೀಕ್ಷಾ ಮೂಲಸೌಕರ್ಯ ನಿರಂತರವಾಗಿ ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ಪತ್ತೆ ಪರೀಕ್ಷೆಗಳಲ್ಲಿ ಗಮನಾರ್ಹ ಏರಿಕೆಯಾಗಿದೆ. ದೇಶದ ಪರೀಕ್ಷಾ ಸಾಮರ್ಥ್ಯ ಹಲವು ಪಟ್ಟು ಹೆಚ್ಚಾಗಿದೆ. ಇದೀಗ ಪ್ರತಿದಿನ ಸುಮಾರು 15 ಲಕ್ಷ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ 10,75,760 ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟು ಸೋಂಕು ಪತ್ತೆ ಪರೀಕ್ಷೆಗಳ ಸಂಖ್ಯೆ 10.65 ಕೋಟಿ (10,65,63,440) ದಾಟಿದೆ.
ಕಳೆದ ಆರು ವಾರಗಳಲ್ಲಿ ಪ್ರತಿದಿನ ಸರಾಸರಿ ಸುಮಾರು 11 ಲಕ್ಷ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಸುಸ್ಥಿರ ರೀತಿಯಲ್ಲಿ ಸಮಗ್ರ ಮತ್ತು ವ್ಯಾಪಕ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಪಾಸಿಟಿವಿಟಿ ದರ ಕ್ರಮೇಣ ತಗ್ಗುತ್ತಿದೆ ಎಂಬುದು ಸಾಬೀತಾಗಿದೆ. ರಾಷ್ಟ್ರ ಮಟ್ಟದಲ್ಲಿ ಒಟ್ಟು ಪಾಸಿಟಿವಿಟಿ ದರ ಗಣನೀಯ ಇಳಿಕೆಯಾಗುತ್ತಿರುವುದು, ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಿರುವುದನ್ನು ತೋರುತ್ತದೆ. ಒಟ್ಟು ಪಾಸಿಟಿವಿಟಿ ದರ ಕ್ರಮೇಣ ಇಳಿಕೆಯಾಗುತ್ತಿದೆ ಮತ್ತು ಅದು ಇಂದು ಶೇ.7.54 ತಲುಪಿದೆ.

ಕಳೆದ ಮೂರು ವಾರಗಳಂದೀಚೆಗೆ ಒಟ್ಟು ಪಾಸಿಟಿವಿಟಿ ದರ ಇಳಿಕೆಯಾಗುತ್ತಿರುವುದು, ದೇಶದಲ್ಲಿ ಪರೀಕ್ಷಾ ಸೌಕರ್ಯವನ್ನು ವ್ಯಾಪಕವಾಗಿ ವಿಸ್ತರಿಸಿರುವುದರ ಸಂಕೇತವಾಗಿದೆ.
ಕಳೆದ 9 ದಿನಗಳಲ್ಲಿ ಒಟ್ಟು 1 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ದಿನದ ಪಾಸಿಟಿವಿಟಿ ದರ ಶೇ.4.64ರಷ್ಟಿದೆ.

ಭಾರತದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆ ಪ್ರವೃತ್ತಿ ಮುಂದುವರಿದಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 6.03.687 ತಲುಪಿದೆ. ಇದು ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ 7.51 ರಷ್ಟಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಪ್ರವೃತ್ತಿಯಿಂದಾಗಿ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಒಟ್ಟು ಗುಣಮುಖರಾಗಿರುವವರ ಪ್ರಮಾಣ 73 ಲಕ್ಷ (73,15,989) ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತು ಗುಣಮುಖರಾಗಿರುವವರ ನಡುವಿನ ಅಂತರ 67 ಲಕ್ಷ (67,12,302) ಇದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಆ ಅಂತರ ಇನ್ನೂ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ 56,480 ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ, ಅದೇ ವೇಳೆ 49,881 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಶೇ.79 ರಷ್ಟು ಹೊಸ ಕೋವಿಡ್ ಪ್ರಕರಣಗಳು 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ್ದಾಗಿವೆ.
ಮಹಾರಾಷ್ಟ್ರದಲ್ಲಿ ದಿನವೊಂದಕ್ಕೆ ಗರಿಷ್ಠ 8ಸಾವಿರಕ್ಕೂ ಅಧಿಕ ಮಂದಿ ಗುಣಮುಖರಾಗುತ್ತಿದ್ದರೆ, ಕೇರಳದಲ್ಲಿ 7ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗುತ್ತಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಹೊಸದಾಗಿ 49,881 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಆ ಪೈಕಿ ಶೇ.79ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದವು. ಕೇರಳದಲ್ಲಿ ಅತ್ಯಧಿಕ ಸಂಖ್ಯೆಯ 8 ಸಾವಿರ ಹೊಸ ಪ್ರಕರಣಗಳು ಕಂಡು ಬಂದಿದ್ದು, ಅಲ್ಲಿ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ, ಮಹಾರಾಷ್ಟ್ರದಲ್ಲಿ 6 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ದೃಢಪಟ್ಟಿವೆ.

ಕಳೆದ 24 ಗಂಟೆಗಳಲ್ಲಿ 517 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಪೈಕಿ ಸುಮಾರು ಶೇ.81ರಷ್ಟು ಪ್ರಕರಣಗಳು 10 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ಮಹಾರಾಷ್ಟ್ರದಲ್ಲಿ ಅತ್ಯಧಿಕ 91 ಸೋಂಕಿತರು ಸಾವನ್ನಪ್ಪಿರುವುದು ವರದಿಯಾಗಿದೆ.

***
(रिलीज़ आईडी: 1668411)
आगंतुक पटल : 218
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Tamil
,
Telugu