ಪ್ರಧಾನ ಮಂತ್ರಿಯವರ ಕಛೇರಿ

ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

ಪ್ರಕಟಣಾ ದಿನಾಂಕ: 01 NOV 2020 9:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಶುಭ ಕೋರಿದ್ದಾರೆ. 
“ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕದ ಜನರ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ರಾಜ್ಯ ಪ್ರಗತಿಯ ಹೊಸ ಉತ್ತುಂಗಕ್ಕೆ ಏರುತ್ತಿದೆ. ನಾನು ಕರ್ನಾಟಕದ ಜನರ ಉತ್ತಮ ಆರೋಗ್ಯ ಮತ್ತು ಸಂತಸಕ್ಕಾಗಿ ಪ್ರಾರ್ಥಿಸುತ್ತೇನೆ.” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

 *****


(ಪ್ರಕಟಣೆ ಐ.ಡಿ.: 1669306) ವಿಸಿಟರ್ ಕೌಂಟರ್ : 194