ಪ್ರಧಾನ ಮಂತ್ರಿಯವರ ಕಛೇರಿ

ಕಾಬೂಲ್ ವಿಶ್ವವಿದ್ಯಾಲಯದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರಧಾನಿ ಖಂಡನೆ

प्रविष्टि तिथि: 02 NOV 2020 11:01PM by PIB Bengaluru

ಕಾಬೂಲ್ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹೇಡಿತನದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

" ಇಂದು ಕಾಬೂಲ್ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಸಂತ್ರಸ್ತರು ಮತ್ತು ಗಾಯಗೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು. ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ನಾವು ಬೆಂಬಲವನ್ನು ಮುಂದುವರೆಸುತ್ತೇವೆ" ಎಂದು ಪ್ರಧಾನಿ ಹೇಳಿದ್ದಾರೆ.

*****


(रिलीज़ आईडी: 1669750) आगंतुक पटल : 188
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam