ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19: ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರತಿದಿನ 8ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖ
27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 20ಸಾವಿರಕ್ಕೂ ಕಡಿಮೆ ಸಕ್ರಿಯ ಪ್ರಕರಣ
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.78ರಷ್ಟು 10 ರಾಜ್ಯಗಳಲ್ಲಿ
Posted On:
05 NOV 2020 11:52AM by PIB Bengaluru
ಭಾರತದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಪ್ರವೃತ್ತಿ ಸುಸ್ಥಿರ ರೀತಿಯಲ್ಲಿ ಮುಂದುವರಿದಿದೆ. ಸತತ ಏಳನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷಕ್ಕಿಂತಲೂ ಕಡಿಮೆ ಇದೆ ಮತ್ತು ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 5,26,962. ದೇಶದಲ್ಲಿನ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ ಕೇವಲ ಶೇ6.31ರಷ್ಟು ಮಾತ್ರ.
ರಾಷ್ಟ್ರೀಯ ಬೆಳವಣಿಗೆ ಆಯಾಮಗಳ ಪ್ರಕಾರ 27 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20ಸಾವಿರಕ್ಕೂ ಕಡಿಮೆ ಇವೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.78ರಷ್ಟು ಪ್ರಕರಣಗಳು 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿವೆ. ಮಹಾರಾಷ್ಟ್ರ, ಕೇರಳ, ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ.51ಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ.
ದಿನದಿಂದ ದಿನಕ್ಕೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಒಟ್ಟು ಗುಣಮುಖವಾಗಿರುವ ಪ್ರಕರಣಗಳು 77,11,809 ಆಗಿವೆ. ರಾಷ್ಟ್ರ ಮಟ್ಟದಲ್ಲಿ ಚೇತರಿಕೆ ಪ್ರಮಾಣ ಶೇ.92.20 ತಲುಪಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 55,331 ಕೋವಿಡ್ ಸೋಂಕಿತರು ಗುಣಮುಖರಾಗಿದ್ದರೆ, 50,210 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
ಹೊಸದಾಗಿ ಗುಣಮುಖರಾಗಿರುವ ಪ್ರಕರಣಗಳಲ್ಲಿ ಶೇ.82ರಷ್ಟು ಪ್ರಕರಣಗಳು 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದವು.
ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕದಲ್ಲಿ ಪ್ರತಿದಿನ ಗರಿಷ್ಠ ಸಂಖ್ಯೆಯ ಸೋಂಕಿತರು ಅಂದರೆ 8 ಸಾವಿರಕ್ಕೂ ಅಧಿಕ ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಈ ರಾಜ್ಯಗಳಲ್ಲಿ ಹೊಸದಾಗಿ ಗುಣಮುಖರಾದವರ ಒಟ್ಟು ಪ್ರಮಾಣ ಶೇ.45ಕ್ಕೂ ಅಧಿಕವಾಗುತ್ತದೆ.
ಕಳೆದ 24 ಗಂಟೆಗಳಲ್ಲಿ 50,210 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿರುವುದು ವರದಿಯಾಗಿದೆ.
ಹೊಸ ಪ್ರಕರಣಗಳಲ್ಲಿ ಶೇ.79ಕ್ಕೂ ಅಧಿಕ ಪ್ರಕರಣಗಳು 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಕ್ಕೆ ಸೇರಿದವು.
ಕೇರಳದಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯ ಅಂದರೆ ದಿನ 8ಸಾವಿರಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಕಂಡುಬರುತ್ತಿವೆ, ಆನಂತರದ ಸ್ಥಾನದಲ್ಲಿರುವ ದೆಹಲಿಯಲ್ಲಿ ಪ್ರತಿದಿನ 6ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಕಂಡುಬರುತ್ತಿವೆ.
ಕಳೆದ 24 ಗಂಟೆಗಳಿಂದೀಚೆಗೆ 704 ಮಂದಿ ಸೋಂಕಿತರು ಬಲಿಯಾಗಿದ್ದಾರೆ.
ಆ ಪೈಕಿ ಶೇ.80ಕ್ಕೂ ಅಧಿಕ ಹೊಸ ಸೋಂಕಿತರ ಮರಣ ಪ್ರಮಾಣ 10 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿವೆ. ಹೊಸದಾಗಿ ಒಟ್ಟು ಮರಣ ಹೊಂದಿರುವ ಸೋಂಕಿತರಲ್ಲಿ ಶೇ.42 ರಷ್ಟು ಮಹಾರಾಷ್ಟ್ರದಲ್ಲಿಯೇ ಸಾವನ್ನಪ್ಪಿದ್ದಾರೆ (300 ಮಂದಿ ಸೋಂಕಿತರು).
****
(Release ID: 1670334)
Visitor Counter : 267
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam