ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಜೋ ಬೈಡನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
Posted On:
08 NOV 2020 9:49AM by PIB Bengaluru
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿರುವ ಜೋ ಬೈಡನ್ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
"ಜೋ ಬೈಡನ್ ನಿಮ್ಮ ಅದ್ಭುತ ಗೆಲುವಿಗೆ ಅಭಿನಂದನೆಗಳು! ಭಾರತ -ಅಮೆರಿಕಾ ಸಂಬಂಧಗಳನ್ನು ಬಲಪಡಿಸುವಲ್ಲಿ ಉಪಾಧ್ಯಕ್ಷರಾಗಿ ನಿಮ್ಮ ಕೊಡುಗೆ ನಿರ್ಣಾಯಕವಾದುದು ಮತ್ತು ಅಮೂಲ್ಯವಾದುದು. ಭಾರತ-ಅಮೆರಿಕಾ ಸಂಬಂಧಗಳನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು, ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
***
(Release ID: 1671176)
Visitor Counter : 185
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam