ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕಳೆದ 24 ಗಂಟೆಗಳಲ್ಲಿ 50 ಸಾವಿರಕ್ಕೂ ಕಡಿಮೆ ಕೋವಿಡ್ ಸೋಂಕು ಪ್ರಕರಣ
ಸಕ್ರಿಯ ಪ್ರಕರಣಗಳು ಮತ್ತು ಗುಣಮುಖ ಪ್ರಕರಣಗಳ ನಡುವಿನ ವ್ಯತ್ಯಾಸ ಕ್ರಮೇಣ ಹೆಚ್ಚಳ
Posted On:
08 NOV 2020 11:04AM by PIB Bengaluru
ಕಳೆದ 24 ಗಂಟೆಗಳಿಂದೀಚೆಗೆ ಭಾರತದಲ್ಲಿ 50,000ಕ್ಕೂ ಕಡಿಮೆ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ, ಅಂದರೆ ಹೊಸದಾಗಿ 45,674 ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಅಕ್ಟೋಬರ್ 15ರಿಂದೀಚೆಗೆ ಹೊಸ ಕೋವಿಡ್ ಸೋಂಕು ಪ್ರಕರಣಗಳು ಕ್ರಮೇಣ ಇಳಿಮುಖವಾಗುತ್ತಿವೆ.
ಹೊಸದಾಗಿ ಗುಣಮುಖರಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದು ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ 49,082 ಸೋಂಕಿತರು ಗುಣಮುಖರಾಗಿದ್ದಾರೆ. ಸತತ 37ನೇ ದಿನವಾದ ಇಂದು ಆ ಪ್ರವೃತ್ತಿ ಮುಂದುವರಿದಿದೆ ಎಂದು ವಿಶ್ಲೇಷಿಸಲಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯ 5.12 ಲಕ್ಷಕ್ಕೆ ಇಳಿಸುವಲ್ಲಿ ಇದು ಮಹತ್ವದ ಪಾತ್ರವಹಿಸಿದೆ.
ದೇಶದಲ್ಲಿ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 5,12,665 ಇದೆ. ಈ ಪ್ರಮಾಣ ಭಾರತದ ಒಟ್ಟು ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಶೇ. 6.03ರಷ್ಟಾಗಿದ್ದು, ಇವು ಕ್ರಮೇಣ ಇಳಿಕೆಯಾಗುತ್ತಿವೆ.
ಗುಣಮುಖರಾಗಿರುವ ಪ್ರಕರಣಗಳ ಸಂಖ್ಯೆ 78,68,968 ಇದ್ದು, ಒಟ್ಟು ಚೇತರಿಕೆ ದರ ಶೇ. 92.49ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು ಮತ್ತು ಗುಣಮುಖರಾಗಿರುವ ಪ್ರಕರಣಗಳ ನಡುವಿನ ಅಂತರ ಹೆಚ್ಚಾಗುತ್ತಿದ್ದು, ಸದ್ಯ ಅದು 73,56,303 ಇದೆ. ಈ ಅಂತರ ಕ್ರಮೇಣ ಹೆಚ್ಚಾಗುತ್ತಿದೆ.
ಹೊಸದಾಗಿ ಗುಣಮುಖರಾಗುತ್ತಿರುವ ಪ್ರಕರಣಗಳಲ್ಲಿ ಶೇ.76ರಷ್ಟು ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಒಂದೇ ದಿನ ಗರಿಷ್ಠ ಸಂಖ್ಯೆಯ ಗುಣಮುಖರಾಗುತ್ತಿರುವವರಲ್ಲಿ ಕೇರಳ, ಮಹಾರಾಷ್ಟ್ರವನ್ನು ಹಿಂದಿಕ್ಕಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 7,120 ಮಂದಿ ಗುಣಮುಖರಾಗಿದ್ದರೆ, ಮಹಾರಾಷ್ಟ್ರದಲ್ಲಿ 6,478 ಮಂದಿ ಗುಣಮುಖರಾಗಿದ್ದಾರೆ.
ಶೇ.76ರಷ್ಟು ಹೊಸ ಪ್ರಕರಣಗಳು 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ್ದಾಗಿವೆ.
ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 7,201 ಪ್ರಕರಣ ವರದಿಯಾಗಿದ್ದು, ದೆಹಲಿಯಲ್ಲಿ 6,953 ಪ್ರಕರಣ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆ ಹೊಸದಾಗಿ 3,959 ಪ್ರಕರಣ ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 559 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.
ಈ ಪೈಕಿ ಸುಮಾರು ಶೇ.79ರಷ್ಟು ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು. ಶೇ.26.8ಕ್ಕೂ ಅಧಿಕ ಹೊಸ ಸಾವುಗಳು ಮಹಾರಾಷ್ಟ್ರದಲ್ಲಿ(150 ಮಂದಿ ಸಾವು) ವರದಿಯಾಗಿವೆ. ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ 79 ಮತ್ತು 58 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
****
(Release ID: 1671265)
Visitor Counter : 180
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu