ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಭಾರತದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ 4.85 ಲಕ್ಷಕ್ಕೆ ಇಳಿಕೆ


ಪ್ರತಿ ದಿನ ಹೊಸ ಪ್ರಕರಣಗಳನ್ನು ಹಿಂದಿಕ್ಕುತ್ತಿರುವ ಗುಣಮುಖವಾಗುತ್ತಿರುವವರ ಸಂಖ್ಯೆ

Posted On: 13 NOV 2020 12:34PM by PIB Bengaluru

ಭಾರತದಲ್ಲಿ ಕೊರೊನಾ ಸೋಂಕು ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಇಂದು 4,84,547 ತಲುಪಿದೆಸತತ ಮೂರನೇ ದಿನವಾದ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ ವರದಿಯಾಗಿದೆ. ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕೇವಲ ಶೇ.5.55ರಷ್ಟು ಮಾತ್ರ.

ಸಕ್ರಿಯ ಪ್ರಕರಣಗಳಿಗಿಂತ ಹೊಸದಾಗಿ ಗುಣಮುಖವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಪ್ರವೃತ್ತಿ ಮುಂದುವರಿದಿರುವುದರಿಂದ ಇದು ಸಾಧ್ಯವಾಗುತ್ತಿದೆ.

http://static.pib.gov.in/WriteReadData/userfiles/image/image001C22W.jpg

ಕಳೆದ 24 ಗಂಟೆಗಳಲ್ಲಿ ಹೊಸದಾಗಿ 44,879 ಪ್ರಕರಣಗಳು ವರದಿಯಾಗಿದ್ದು, ಅದಕ್ಕೆ ಪ್ರತಿಯಾಗಿ 49,079 ಸೋಂಕಿತರು ಗುಣಮುಖರಾಗಿದ್ದಾರೆ. ಹಾಗಾಗಿ ಪ್ರತಿ ದಿನ ಹೊಸ ಪ್ರಕರಣಗಳಿಗಿಂತ ಗುಣಮುಖವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಳದ ಪ್ರವೃತ್ತಿ ಮುಂದುವರಿದಿದೆ. ಕಳೆದ 41 ದಿನಗಳಿಂದ ಇದೇ ಪ್ರವೃತ್ತಿ ಮುಂದುವರಿಯುತ್ತಿರುವುದನ್ನು ವಿಶ್ಲೇಷಿಸಲಾಗಿದೆ.

http://static.pib.gov.in/WriteReadData/userfiles/image/image002W776.jpg

ದೇಶದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 81,15,580 ತಲುಪಿದ್ದು, ಚೇತರಿಕೆ ಪ್ರಮಾಣ ಶೇ. 92.97 ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು ಮತ್ತು ಗುಣಮುಖರಾಗಿರುವ ಪ್ರಕರಣಗಳ ನಡುವಿನ ಅಂತರ ಬೆಳೆಯುತ್ತಿದ್ದು, ಸದ್ಯ ಅದು 76,31,033 ರಷ್ಟಿದೆ.

ಹೊಸದಾಗಿ ಗುಣಮುಖರಾಗಿರುವ ಶೇ. 77.83ರಷ್ಟು ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದವು.

ಮಹಾರಾಷ್ಟ್ರದಲ್ಲಿ ಒಂದೇ ದಿನ ಗರಿಷ್ಠ ಸಂಖ್ಯೆಯ 7,809 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 16,05,064ಕ್ಕೆ ಏರಿದೆ.

http://static.pib.gov.in/WriteReadData/userfiles/image/image003DS2C.jpg

ಹೊಸ ಪ್ರಕರಣಗಳಲ್ಲಿ ಶೇ.76.25ರಷ್ಟು ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದವು.

ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು 7,053 ವರದಿಯಾಗಿದೆ. ಕೇರಳದಲ್ಲಿ 5,537 ಹೊಸ ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ ನಿನ್ನೆ 4,496 ಪ್ರಕರಣಗಳು ವರದಿಯಾಗಿವೆ.

http://static.pib.gov.in/WriteReadData/userfiles/image/image004U351.jpg

ಕಳೆದ 24 ಗಂಟೆಗಳಲ್ಲಿ  547 ಮಂದಿ ಸಾವನ್ನಪ್ಪಿರುವುದು ವರದಿಯಾಗಿದ್ದು, ಪೈಕಿ ಶೇ.80ರಷ್ಟು(ಶೇ.79.34)ರಷ್ಟು ಪ್ರಕರಣಗಳು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.

ಹೊಸದಾಗಿ ಮರಣವನ್ನಪ್ಪಿರುವ ಸೋಂಕಿತರ ಪ್ರಮಾಣದಲ್ಲಿ ಶೇ.22.3ರಷ್ಟು ಅಂದರೆ 122 ಸಾವು ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ನಂತರ ದೆಹಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ 104 ಮತ್ತು 54 ಸೋಂಕಿತರು ಸಾವನ್ನಪ್ಪಿದ್ದಾರೆ.

http://static.pib.gov.in/WriteReadData/userfiles/image/image0055GQO.jpg

***


(Release ID: 1672620) Visitor Counter : 245