ಪ್ರಧಾನ ಮಂತ್ರಿಯವರ ಕಛೇರಿ

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಗೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 16 NOV 2020 5:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

"ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಹಾರ ಸರ್ಕಾರದಲ್ಲಿ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎನ್.ಡಿ.. ಕುಟುಂಬ ಬಿಹಾರದ ಪ್ರಗತಿಗಾಗಿ ಒಗ್ಗೂಡಿ ಶ್ರಮಿಸಲಿದೆ. ನಾನು ಬಿಹಾರದ ಕಲ್ಯಾಣಕ್ಕೆ ಕೇಂದ್ರದಿಂದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡುತ್ತೇನೆ." ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.

***

 


(रिलीज़ आईडी: 1673221) आगंतुक पटल : 175
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam