ಪ್ರಧಾನ ಮಂತ್ರಿಯವರ ಕಛೇರಿ

ವಡೋದರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

Posted On: 18 NOV 2020 10:57AM by PIB Bengaluru

ವಡೋದರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಸಾವುನೋವುಗಳಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

 “ವಡೋದರಾದಲ್ಲಿ ಸಂಭವಿಸಿದ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದ ಸ್ಥಳದಲ್ಲಿ ಸಾಧ್ಯವಿರುವ ಎಲ್ಲ ನೆರವನ್ನೂ ಆಡಳಿತವು ಒದಗಿಸುತ್ತಿದೆ.” ಎಂದು ಟ್ವೀಟ್ ನಲ್ಲಿ ಶ್ರೀ ಮೋದಿ ಹೇಳಿದ್ದಾರೆ.

*************


(Release ID: 1673745) Visitor Counter : 165