ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಯತ್ನವನ್ನು ವಿಫಲಗೊಳಿಸಿದುದಕ್ಕಾಗಿ ಭದ್ರತಾ ಪಡೆಗಳಿಗೆ ಪ್ರಧಾನಮಂತ್ರಿ ಧನ್ಯವಾದ
प्रविष्टि तिथि:
20 NOV 2020 4:11PM by PIB Bengaluru
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ತಳಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ಗುರಿಯಾಗಿಸಿಕೊಂಡು ಜೈಶೆ-ಇ-ಮೊಹಮ್ಮದ್ ನಡೆಸಿದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದುದಕ್ಕಾಗಿ ಭದ್ರತಾ ಪಡೆಗಳಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಹೇಳಿದ್ದಾರೆ.
“ಪಾಕಿಸ್ತಾನ ಮೂಲದ ಜೈಶೆ–ಇ-ಮೊಹಮ್ಮದ್ ಸಂಘಟನೆಯ ನಾಲ್ಕು ಮಂದಿ ಭಯೋತ್ಪಾದಕರನ್ನು ತಟಸ್ಥಗೊಳಿಸಿ, ಅವರಲ್ಲಿದ್ದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಹಾಗು ಸ್ಪೋಟಕಗಳನ್ನು ವಶಪಡಿಸಿಕೊಂಡಿರುವುದು, ದೊಡ್ಡ ಪ್ರಮಾಣದ ಹಾನಿಯನ್ನು ಉಂಟು ಮಾಡುವ ಅವರ ಪ್ರಯತ್ನಗಳನ್ನು ವಿಫಲ ಮಾಡಿರುವುದರ ಸೂಚನೆಯಾಗಿದೆ” ಎಂದು ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ.
“ನಮ್ಮ ಭದ್ರತಾ ಪಡೆಗಳು ಮತ್ತೊಮ್ಮೆ ಅತ್ಯುನ್ನತ ಧೈರ್ಯ ಮತ್ತು ವೃತ್ತಿಪರತೆಯನ್ನು ತೋರಿಸಿವೆ. ಅವರ ಎಚ್ಚರದ ನಡೆಗೆ ಧನ್ಯವಾದ, ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಸತ್ತಾತ್ಮಕ ಕಾರ್ಯಚಟುವಟಿಕೆಗಳನ್ನು ಗುರಿಯಾಗಿರಿಸಿಕೊಂಡು ಅವುಗಳನ್ನು ಹಾಳುಗೆಡವಲು ಮಾಡಿದ ಅಸಹ್ಯಕರ ಸಂಚನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ” ಎಂದೂ ಮೋದಿ ಹೇಳಿದ್ದಾರೆ.
***
(रिलीज़ आईडी: 1674532)
आगंतुक पटल : 279
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam