ಸಿಬ್ಬಂದಿ, ಸಾರ್ವಜನಿಕ ಅಹವಾಲು ಮತ್ತು ಪಿಂಚಣಿ ಸಚಿವಾಲಯ

ಲಾಲ್ ಬಹಾದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಿಂದ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳ ಅನುಸರಣೆ

प्रविष्टि तिथि: 21 NOV 2020 5:43PM by PIB Bengaluru

ನವೆಂಬರ್ 20 ರಿಂದೀಚೆಗೆ, ಲಾಲ್ ಬಹಾದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ 57 ಮಂದಿ ಅಧಿಕಾರಿಗಳಿಗಳಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿದೆ.

ನಾಗರಿಕ ಸೇವೆಗಳಿಗೆ ಆಯ್ಕೆಯಾಗಿರುವ ಹೊಸಬರಿಗಾಗಿ ನಡೆಸಲಾಗುವ 95 ನೇ ಫೌಂಡೇಶನ್ ಕೋರ್ಸ್ ನಲ್ಲಿ ಒಟ್ಟು 428 ಮಂದಿ ತರಬೇತಿ ಪಡೆಯುತ್ತಿರುವ ಅಧಿಕಾರಿಗಳಿದ್ದಾರೆ.

ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಡೆಹ್ರಾಡೂನ್ ಜಿಲ್ಲಾಡಳಿತಗಳ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಕೋವಿಡ್ ಹರಡುವಿಕೆ ನಿಯಂತ್ರಿಸಲು ಅಕಾಡೆಮಿಯು ಎಲ್ಲಾ ಕ್ರಮಗಳನ್ನೂ ಕೈಗೊಳ್ಳುತ್ತಿದೆ. ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ಆಗಿರುವ ಎಲ್ಲಾ ತರಬೇತಿಯಲ್ಲಿರುವ  ಅಧಿಕಾರಿಗಳನ್ನು  ಕೋವಿಡ್ ಆರೈಕೆ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ನವೆಂಬರ್ 20 ರಿಂದೀಚೆಗೆ, ಅಕಾಡೆಮಿಯು 162 ಕ್ಕೂ ಅಧಿಕ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗಳನ್ನು ಜಿಲ್ಲಾಡಳಿತದ ಜೊತೆ ಸಮನ್ವಯದೊಂದಿಗೆ ನಡೆಸಿದೆ.

ಅಕಾಡೆಮಿಯು ಡಿಸೆಂಬರ್ 30 ರವರೆಗೆ ತರಬೇತಿ ಸಹಿತ ಎಲ್ಲಾ ಚಟುವಟಿಕೆಗಳನ್ನು ಆನ್ ಲೈನ್ ಮೂಲಕ ನಡೆಸಲು ನಿರ್ಧರಿಸಿದೆ. ಸಾಮಾಜಿಕ ಅಂತರ, ಪದೇ ಪದೇ ಕೈತೊಳೆಯುವಿಕೆ ಮತ್ತು ಮುಖಗವಸುಗಳನ್ನು ಧರಿಸುವಿಕೆಗೆ ಸಂಬಂಧಿಸಿದ ಶಿಷ್ಟಾಚಾರಗಳನ್ನು ತರಬೇತಿಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸದಸ್ಯರು ಕಟ್ಟು ನಿಟ್ಟಾಗಿ ಅನುಸರಿಸುತ್ತಿದ್ದಾರೆ.

ಸಾಕಷ್ಟು ರಕ್ಷಣಾ ವ್ಯವಸ್ಥೆಗಳನ್ನು ಹೊಂದಿರುವ ಸಿಬ್ಬಂದಿಗಳು ತರಬೇತಿಯಲ್ಲಿರುವ ಅಧಿಕಾರಿಗಳಿಗೆ ಅವರ ಹಾಸ್ಟೆಲಿನಲ್ಲಿ ಆಹಾರ ಮತ್ತು ಇತರ ಅವಶ್ಯಕತೆಗಳನ್ನು ಪೂರೈಸುತ್ತಿದ್ದಾರೆ.

***


(रिलीज़ आईडी: 1674811) आगंतुक पटल : 284
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Punjabi , Telugu