ಪ್ರಧಾನ ಮಂತ್ರಿಯವರ ಕಛೇರಿ
ನವೆಂಬರ್ 25, ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ಪ್ರಧಾನಿ ಪಾಲ್ಗೊಳ್ಳುವಿಕೆ
Posted On:
23 NOV 2020 1:04PM by PIB Bengaluru
ಲಕ್ನೋ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. 2020 ರ ನವೆಂಬರ್ 25 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 1920 ರಲ್ಲಿ ಲಕ್ನೋ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದ್ದು ಈಗ ಅದು ಶತಮಾನೋತ್ಸವ (100 ನೇ) ವರ್ಷವನ್ನು ಆಚರಿಸುತ್ತಿದೆ.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ವಿಶ್ವವಿದ್ಯಾಲಯದ ಶತಮಾನೋತ್ಸವದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಭಾರತೀಯ ಅಂಚೆ ಹೊರತಂದಿರುವ ವಿಶೇಷ ಸ್ಮರಣಾರ್ಥ ಅಂಚೆ ಚೀಟಿ ಮತ್ತು ವಿಶೇಷ ಕವರ್ ಅನ್ನೂ ಸಹ ಅವರು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವರು, ಉತ್ತರ ಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ.
***
(Release ID: 1675082)
Visitor Counter : 210
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam