ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಭಾರತದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ ಶೇ. 5ಕ್ಕಿಂತಲೂ ಕಡಿಮೆ
ಶೇ. 93ಕ್ಕೂ ಅಧಿಕ ಚೇತರಿಕೆ ಪ್ರಮಾಣ
ಕಳೆದ 16 ದಿನಗಳಿಂದ ಪ್ರತಿದಿನ 50 ಸಾವಿರಕ್ಕಿಂತ ಕಡಿಮೆ ಸೋಂಕು ಪ್ರಕರಣ ದಾಖಲು
Posted On:
23 NOV 2020 11:38AM by PIB Bengaluru
ಭಾರತದಲ್ಲಿ ಸದ್ಯ ಕೋವಿಡ್ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,43,486 ಇದ್ದು, ಇದು ಒಟ್ಟು ಪ್ರಕರಣಗಳಲ್ಲಿ ಶೇ, 4.85ರಷ್ಟಾಗಿದೆ ಮತ್ತು ನಿರಂತರವಾಗಿ ಶೇ.5ಕ್ಕಿಂತ ಕಡಿಮೆ ಮುಂದುವರಿದಿದೆ.
ಸೋಂಕಿತರ ಚೇತರಿಕೆ ಪ್ರಮಾಣ ಶೇ.93ಕ್ಕೂ ಅಧಿಕ ಮುಂದುವರಿದಿದ್ದು, ಸದ್ಯ ಅದು ಶೇ.93.68ರಷ್ಟು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ, ದೇಶದಲ್ಲಿ ಹೊಸದಾಗಿ 41.024 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 85,62,641ಕ್ಕೆ ತಲುಪಿದೆ.
ಅಂತೆಯೇ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತು ಗುಣಮುಖರಾದವರ ನಡುವಿನ ಅಂತರ ಹೆಚ್ಚಾಗುತ್ತಿದ್ದು, ಸದ್ಯ ಅದು 81,19,155 ಇದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 44,059 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಭಾರತದಲ್ಲಿ ಕಳೆದ 16 ದಿನಗಳಿಂದೀಚೆಗೆ, ಅಂದರೆ ನವೆಂಬರ್ 8ರಿಂದ ನಿರಂತರವಾಗಿ ಪ್ರತಿದಿನ 50 ಸಾವಿರಕ್ಕಿಂತಲೂ ಕಡಿಮೆ ಸೋಂಕು ಪ್ರಕರಣಗಳು ದಾಖಲಾಗುತ್ತಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಪೂರ್ವ ರಾಷ್ಟ್ರ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಹೊಸ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಹೊಸದಾಗಿ ಗುಣಮುಖವಾಗಿರುವ ಪ್ರಕರಣಗಳಲ್ಲಿ ಶೇ.77.44ರಷ್ಟು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ಕೇರಳದಲ್ಲಿ ಕೋವಿಡ್ ಸೋಂಕಿನಿಂದ 6,227 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ 6,154 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 4,060 ಸೋಂಕಿತರು ಗುಣಮುಖರಾಗಿದ್ದಾರೆ.
ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೊಸದಾಗಿ ಶೇ.78.74 ಕೋವಿಡ್ ಪ್ರಕರಣ ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 6,756 ಪ್ರಕರಣ ವರದಿಯಾಗಿವೆ. ಅಂತೆಯೇ ಮಹಾರಾಷ್ಟ್ರದಲ್ಲಿ 5,753 ಮತ್ತು ಕೇರಳದಲ್ಲಿ 5254 ಹೊಸ ಪ್ರಕರಣಗಳು ನಿನ್ನೆ ವರದಿಯಾಗಿವೆ.
15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ರಾಷ್ಟ್ರೀಯ ಸರಾಸರಿ (6.623) ಕ್ಕಿಂತ ಕಡಿಮೆ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ 511 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದು, ಆ ಪೈಕಿ ಶೇ.74.95ರಷ್ಟು ಪ್ರಕರಣ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ದೆಹಲಿಯಲ್ಲಿ ಶೇ.23.68ರಷ್ಟು ಅಂದರೆ 121 ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 50 ಸೋಂಕಿತರು ಮತ್ತು ಪಶ್ಚಿಮ ಬಂಗಾಳದಲ್ಲಿ 49 ಸೋಂಕಿತರು ಹೊಸದಾಗಿ ಸಾವನ್ನಪ್ಪಿದ್ದಾರೆ.
21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಮರಣ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ (97) ಇದೆ.
***
(Release ID: 1675083)
Visitor Counter : 269
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam