ಪ್ರಧಾನ ಮಂತ್ರಿಯವರ ಕಛೇರಿ

ನಿವರ್ ಚಂಡಮಾರುತ ಪರಿಸ್ಥಿತಿ ಕುರಿತು ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಮಾತುಕತೆ

Posted On: 24 NOV 2020 11:10AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿವರ್ ಚಂಡಮಾರುತದ ಹಿನ್ನೆಲೆಯಲ್ಲಿ ಎದುರಾಗಿರುವ ಪರಿಸ್ಥಿತಿಯ ಕುರಿತಂತೆ ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಪುದುಚೇರಿ ಮುಖ್ಯಮಂತ್ರಿ ಶ್ರೀ ವಿ ನಾರಾಯಣಸಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

"ನಿವರ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಶ್ರೀ @.ಪಿ.ಎಸ್. ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿ ಶ್ರೀ @ ವಿ.ನಾರಾಯಣಸಾಮಿ ಅವರೊಂದಿಗೆ ಮಾತನಾಡಿದೆ. ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದೇನೆ. ಬಾಧಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದು ಟ್ವಿಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.

***


(Release ID: 1675271) Visitor Counter : 173