ಪ್ರಧಾನ ಮಂತ್ರಿಯವರ ಕಛೇರಿ

ನವೆಂಬರ್ 26, 80 ನೇ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ಭಾಷಣ

प्रविष्टि तिथि: 24 NOV 2020 5:54PM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26 ರಂದು 80 ನೇ ಅಖಿಲ ಭಾರತ ಸಭಾಧ್ಯಕ್ಷರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ.

ಅಖಿಲ ಭಾರತ ಸಭಾಧ್ಯಕ್ಷರ ಸಮ್ಮೇಳನ 1921 ರಲ್ಲಿ ಪ್ರಾರಂಭವಾಯಿತು. ವರ್ಷವನ್ನು ಸಭಾಧ್ಯಕ್ಷರ ಸಮ್ಮೇಳನದ ಶತಮಾನೋತ್ಸವವಾಗಿಯೂ ಆಚರಿಸಲಾಗುತ್ತಿದೆ. ಶತಮಾನೋತ್ಸವವನ್ನು ಆಚರಿಸಲು, ಎರಡು ದಿನಗಳ ಸಮ್ಮೇಳನವನ್ನು ನವೆಂಬರ್ 25-26ರಂದು ಗುಜರಾತ್ ಕೆವಾಡಿಯಾದಲ್ಲಿ ಆಯೋಜಿಸಲಾಗಿದೆ. ವರ್ಷದ ಸಮ್ಮೇಳನದ ವಿಷಯ "ರೋಮಾಂಚಕ ಪ್ರಜಾಪ್ರಭುತ್ವಕ್ಕೆ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸಾಮರಸ್ಯದ ಸಮನ್ವಯ".

ಸಮ್ಮೇಳನವನ್ನು ನವೆಂಬರ್ 25 ರಂದು ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರು ಉದ್ಘಾಟಿಸಲಿದ್ದಾರೆ. ಸಮ್ಮೇಳನದಲ್ಲಿ ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷರಾದ ಶ್ರೀ ಎಂ.ವೆಂಕಯ್ಯ ನಾಯ್ಡು, ಲೋಕಸಭಾಧ್ಯಕ್ಷರು ಮತ್ತು ಸಮ್ಮೇಳನದ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ, ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

***


(रिलीज़ आईडी: 1675493) आगंतुक पटल : 221
इस विज्ञप्ति को इन भाषाओं में पढ़ें: Assamese , Tamil , English , Urdu , Marathi , हिन्दी , Bengali , Manipuri , Punjabi , Gujarati , Odia , Telugu , Malayalam