ಪ್ರಧಾನ ಮಂತ್ರಿಯವರ ಕಛೇರಿ

ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 25 NOV 2020 9:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹ್ಮದ್ ಪಟೇಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ "ಅಹ್ಮದ್ ಪಟೇಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಅವರು, ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದರು. ತಮ್ಮ ತೀಕ್ಷ್ಣ ಮತಿಗೆ ಹೆಸರುವಾಸಿಯಾಗಿದ್ದ, ಅವರು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ವಹಿಸಿದ್ದ ಪಾತ್ರ ಸದಾ ಸ್ಮರಣೆಯಲ್ಲಿರುತ್ತದೆ. ಅವರ ಪುತ್ರ ಫೈಸಲ್ ಅವರೊಂದಿಗೆ ಮಾತನಾಡಿ ಸಂತಾಪ ವ್ಯಕ್ತಪಡಿಸಿದ್ದೇನೆ. ಅಹ್ಮದ್ ಭಾಯ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ." ಎಂದು ತಿಳಿಸಿದ್ದಾರೆ.

***


(रिलीज़ आईडी: 1675571) आगंतुक पटल : 184
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam