ಪ್ರಧಾನ ಮಂತ್ರಿಯವರ ಕಛೇರಿ

ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಚರ್ಚೆ


ಚಂಡಮಾರುತ ಸಂತ್ರಸ್ತರಿಗೆ ಪರಿಹಾರ ಪ್ರಕಟ

Posted On: 27 NOV 2020 9:59PM by PIB Bengaluru

ತಮಿಳುನಾಡಿನ ಕೆಲವು ಭಾಗಗಳಲ್ಲಿ ಚಂಡಮಾರುತ ಮತ್ತು ಭಾರಿ ಮಳೆಯ ಹಿನ್ನೆಲೆಯಲ್ಲಿ ಉಂಟಾದ ಪರಿಸ್ಥಿತಿ ಕುರಿತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು. ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ರಾಜ್ಯಕ್ಕೆ ನೆರವಾಗಲು ಕೇಂದ್ರ ತಂಡಗಳನ್ನು ತಮಿಳುನಾಡಿಗೆ ಕಳುಹಿಸಲಾಗುತ್ತಿದೆ.

ಚಂಡಮಾರುತದಿಂದಾಗಿ ಉಂಟಾದ ಪ್ರಾಣಹಾನಿಯ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದರು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.  ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಿ ಪ್ರಕಟಿಸಿದರು.

***


(Release ID: 1676925) Visitor Counter : 126