ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕು ಪ್ರಕರಣಗಳ ಕುಸಿತ; 4.35 ಲಕ್ಷಕ್ಕೆ ಇಳಿಕೆ ಹೊಸ ಪ್ರಕರಣಗಳಿಗಿಂತ ಗುಣಮುಖವಾಗುತ್ತಿರುವ ಪ್ರಕರಣಗಳೇ ಅಧಿಕ
Posted On:
01 DEC 2020 12:12PM by PIB Bengaluru
ಭಾರತದಲ್ಲಿ ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿ 4,35,603 ತಲುಪಿದ್ದು, ಇದು 5 ಲಕ್ಷಕ್ಕಿಂತಲೂ ಕೆಳಗೆ ಇಳಿದಿದೆ. ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.4.60ಗೆ ಇಳಿಕೆಯಾಗಿದೆ.
ಪ್ರತಿ ದಿನ ಹೊಸ ಪ್ರಕರಣಗಳಿಗಿಂತ ಗುಣಮುಖವಾಗುತ್ತಿರುವ ಪ್ರಕರಣಗಳು ಅಧಿಕವಾಗಿರುವುದರಿಂದ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳಲ್ಲಿ 11,349 ಇಳಿಕೆ ಕಂಡುಬಂದಿದೆ.
ಕಳೆದ 24 ಗಂಟೆಗಳಲ್ಲಿ ಒಟ್ಟಾರೆ ರಾಷ್ಟ್ರೀಯ ಸರಾಸರಿಗೆ ಹೊಸದಾಗಿ 31,118 ಪ್ರಕರಣಗಳು ಸೇರ್ಪಡೆಯಾಗಿವೆ.
ಕಳೆದ 24 ಗಂಟೆಗಳಲ್ಲಿ ಕೆಲವು ರಾಜ್ಯಗಳಲ್ಲಿ (ಕೇರಳ, ದೆಹಲಿ, ಕರ್ನಾಟಕ, ಛತ್ತೀಸ್ ಗಢ ಇತ್ಯಾದಿ) ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಆದರೆ ಉತ್ತರಾಖಂಡ, ಗುಜರಾತ್, ಅಸ್ಸಾಂ ಮತ್ತು ಗೋವಾಗಳಲ್ಲಿ ಹೆಚ್ಚುವರಿಯಾಗಿ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 31,118 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಅದಕ್ಕೆ ಪ್ರತಿಯಾಗಿ ಹೊಸದಾಗಿ 41,985 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಒಟ್ಟು ಗುಣಮುಖವಾಗಿರುವವರ ಸಂಖ್ಯೆ 88,89,585 ಏರಿಕೆಯಾಗಿದ್ದು, ಶೇಕಡಾವಾರು ಪ್ರಮಾಣದಲ್ಲಿ ಚೇತರಿಕೆ ದರ ಶೇ. 93.94 ರಷ್ಟಿದೆ. ಸಕ್ರಿಯ ಪ್ರಕರಣಗಳು ಮತ್ತು ಗುಣಮುಖವಾಗಿರುವ ಪ್ರಕರಣಗಳ ನಡುವಿನ ಅಂತರ ಹೆಚ್ಚಾಗುತ್ತಿದೆ ಮತ್ತು ಸದ್ಯ ಅದು 84,53,982 ಇದೆ.
ಹೊಸದಾಗಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಶೇ. 76.82ರಷ್ಟು ಪ್ರಕರಣ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು
ಕೇರಳದಲ್ಲಿ ಅತ್ಯಧಿಕ ಸಂಖ್ಯೆಯ ಸೋಂಕಿತರು ಅಂದರೆ 6,055 ಸೋಂಕಿತರು ಗುಣಮುಖರಾಗಿದ್ದರೆ, ಆನಂತರ ದೆಹಲಿಯಲ್ಲಿ 5,824 ಸೋಂಕಿತರು ಗುಣಮುಖರಾಗಿದ್ದಾರೆ.
ಹೊಸದಾಗಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಶೇ. 77.79ರಷ್ಟು ಪ್ರಕರಣ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಅತ್ಯಧಿಕ ಸಂಖ್ಯೆಯ ಹೊಸ ಪ್ರಕರಣಗಳು 3,837 ದೃಢಪಟ್ಟಿವೆ. ದೆಹಲಿಯಲ್ಲಿ ಹೊಸದಾಗಿ 3,726 ಮತ್ತು ಕೇರಳದಲ್ಲಿ 3,382 ಹೊಸ ಪ್ರಕರಣ ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ ಹೊಸದಾಗಿ 482 ಮಂದಿ ಸಾವನ್ನಪ್ಪಿದ್ದಾರೆ. ಆ ಪೈಕಿ ಶೇ.81.12ರಷ್ಟು ಪ್ರಕರಣ ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದವು.
ಹೊಸದಾಗಿ ಸಾವನ್ನಪ್ಪಿರುವವರ ಪೈಕಿ ದೆಹಲಿಯಲ್ಲಿ ಶೇ.22.4ರಷ್ಟು ಅಂದರೆ 108 ಮಂದಿ ಸಾವನ್ನಪ್ಪಿದ್ದಾರೆ. ಆನಂತರ ಕ್ರಮವಾಗಿ ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ 80 ಹಾಗೂ 48 ಸೋಂಕಿತರು ಸಾವನ್ನಪ್ಪಿದ್ದಾರೆ.
***
(Release ID: 1677357)
Visitor Counter : 157
Read this release in:
English
,
Urdu
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam