ಪ್ರಧಾನ ಮಂತ್ರಿಯವರ ಕಛೇರಿ

ಬುರೇವಿ ಚಂಡಮಾರುತ ಪರಿಸ್ಥಿತಿ ಕುರಿತು ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಚರ್ಚೆ

Posted On: 02 DEC 2020 8:13PM by PIB Bengaluru

ಬುರೇವಿ ಚಂಡಮಾರುತದಿಂದ ತಮಿಳುನಾಡಿನಲ್ಲಿ ಉಂಟಾಗಿರುವ ಪರಿಸ್ಥಿತಿಗಳನ್ನು ಕುರಿತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದರು.

"ಬುರೇವಿ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಉದ್ಭವಿಸಿರುವ ಪರಿಸ್ಥಿತಿಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಶ್ರೀ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಚಂಡಮಾರುತದಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಉಂಟಾಗಿರುವ ಪರಿಸ್ಥಿತಿಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ತಮಿಳುನಾಡಿಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದೇನೆ. ಸಂತ್ರಸ್ತ ಪ್ರದೇಶಗಳಲ್ಲಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. "ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

***(Release ID: 1677820) Visitor Counter : 22