ಪ್ರಧಾನ ಮಂತ್ರಿಯವರ ಕಛೇರಿ

ಬುರೇವಿ ಚಂಡಮಾರುತ ಪರಿಸ್ಥಿತಿ ಕುರಿತು ಕೇರಳ ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಚರ್ಚೆ

प्रविष्टि तिथि: 02 DEC 2020 8:11PM by PIB Bengaluru

ಬುರೇವಿ ಚಂಡಮಾರುತದಿಂದ ಕೇರಳದಲ್ಲಿ ಉಂಟಾಗಿರುವ ಪರಿಸ್ಥಿತಿಗಳನ್ನು ಕುರಿತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದರು.

"ಬುರೇವಿ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಉದ್ಭವಿಸಿರುವ ಪರಿಸ್ಥಿತಿಗಳ ಬಗ್ಗೆ ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಕೇರಳಕ್ಕೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲದ ಭರವಸೆ ನೀಡಿದ್ದೇನೆ. ಸಂತ್ರಸ್ತ ಪ್ರದೇಶಗಳಲ್ಲಿರುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. "ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

***


(रिलीज़ आईडी: 1677821) आगंतुक पटल : 161
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam