ಪ್ರಧಾನ ಮಂತ್ರಿಯವರ ಕಛೇರಿ

ಡಿಸೆಂಬರ್ 10 ರಂದು ನೂತನ ಸಂಸತ್ ಭವನದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ

Posted On: 08 DEC 2020 8:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020 ಡಿಸೆಂಬರ್ 10ರಂದು ನವದೆಹಲಿಯ ಸಂಸದ್ ಮಾರ್ಗದಲ್ಲಿ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹೊಸ ಭವನಆತ್ಮನಿರ್ಭರ ಭಾರತಕನಸಿನ ಒಂದು ಆಂತರಿಕ ಭಾಗವಾಗಿದೆ ಮತ್ತು ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಜನತೆಯ ಸಂಸತ್ ನಿರ್ಮಾಣ ಮಾಡುವ ಐತಿಹಾಸಿಕ ಅವಕಾಶವಾಗಿದೆ. 2022ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿನವ ಭಾರತ ಆಶೋತ್ತರಗಳು ಮತ್ತು ಅಗತ್ಯತೆಗಳನ್ನು ಪೂರೈಸಲು ಭವನ ನಿರ್ಮಿಸಲಾಗುತ್ತಿದೆ.

ನೂತನ ಸಂಸತ್ ಭವನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಪರಿಣಾಮಕಾರಿ ಇಂಧನ ವ್ಯವಸ್ಥೆ, ತಡೆರಹಿತ ಭದ್ರತಾ ಸೌಲಭ್ಯಗಳು ಒಳಗೊಂಡಿರಲಿದ್ದು, ಕಟ್ಟಡ ಹಾಲಿ ಸಂಸತ್ ಭವನಕ್ಕೆ ಹೊಂದಿಕೊಂಡಂತೆ ತ್ರಿಕೋನಾಕಾರದ ವಿನ್ಯಾಸದಲ್ಲಿ ನಿರ್ಮಾಣವಾಗಲಿದೆ. ಲೋಕಸಭೆಯ ಒಳಾಂಗಣ ಪ್ರದೇಶ ಹಾಲಿ ಇರುವುದಕ್ಕಿಂತ ಮೂರು ಪಟ್ಟು ಹೆಚ್ಚಾಗಲಿದೆ ಮತ್ತು ರಾಜ್ಯಸಭೆಯ ವಿಸ್ತ್ರೀರ್ಣ ಗಣನೀಯವಾಗಿ ಹೆಚ್ಚಾಗಲಿದೆ. ಹೊಸ ಭವನ ಒಳಾಂಗಣ ವಿನ್ಯಾಸದಲ್ಲಿ ಭಾರತೀಯ ಸಂಸ್ಕೃತಿ ಮತ್ತು ನಮ್ಮ ಪ್ರಾದೇಶಿಕ ಕಲೆ, ಕರಕುಶಲಕಲೆ, ಜವಳಿ ಮತ್ತು ವಾಸ್ತುಶಿಲ್ಪ ಸೇರಿದಂತೆ ವೈವಿಧ್ಯತೆಯ ಸಮ್ಮಿಶ್ರಣವಾಗಿರಲಿದೆ. ಇದರ ವಿನ್ಯಾಸದಲ್ಲಿ ಅದ್ಭುತ ಕೇಂದ್ರೀಯ ಸಂವಿಧಾನ ಗ್ಯಾಲರಿಗೆ ಸ್ಥಳಾವಕಾಶ ಕಲ್ಪಿಸಲಾಗಿದ್ದು, ಅದಕ್ಕೆ ಸಾರ್ವಜನಿಕರ ಭೇಟಿ ನೀಡಲು ಅವಕಾಶವಿರಲಿದೆ.

ನೂತನ ಸಂಸತ್ ಭವನದ ನಿರ್ಮಾಣದಲ್ಲಿ ಹಸಿರು ತಂತ್ರಜ್ಞಾನದ ಪರಿಣಾಮಕಾರಿ ಸಂಪನ್ಮೂಲವನ್ನು ಬಳಸಿಕೊಳ್ಳಲಾಗುತ್ತಿದ್ದು, ಪರಿಸರಸ್ನೇಹಿ ಪದ್ಧತಿಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಜೊತೆಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಹಾಗೂ ಆರ್ಥಿಕ ಪುನರುಜ್ಜೀವನಕ್ಕೆ ನೆರವು ನೀಡಲಾಗುತ್ತಿದೆ. ಇದರಲ್ಲಿ ಉನ್ನತ ಗುಣಮಟ್ಟದ ಧ್ವನಿಜ್ಞಾನ ಮತ್ತು ದೃಶ್ಯ ಹಾಗೂ ಶ್ರವಣ ಸೌಕರ್ಯಗಳು, ಸುಧಾರಿತ ಮತ್ತ ಆರಾಮ ಆಸನ ವ್ಯವಸ್ಥೆ, ಪರಿಣಾಮಕಾರಿ ಮತ್ತು ತುರ್ತು ತೆರವು ಅವಕಾಶಗಳನ್ನು ಕಲ್ಪಿಸಲಾಗಿದೆ. ಕಟ್ಟಡದಲ್ಲಿ ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಕಾಯ್ದುಕೊಳ್ಳಲಾಗುತ್ತಿದ್ದು, ಭೂಕಂಪನ ವಲಯದ ಐದು ಅಗತ್ಯತೆಗಳನ್ನು ಅನುಸರಿಸಲಾಗುತ್ತಿದೆ ಮತ್ತು ಅದರ ನಿರ್ವಹಣೆ ಹಾಗೂ ಕಾರ್ಯಾಚರಣೆ ಸುಲಭವಾಗುವಂತೆ ವಿನ್ಯಾಸಗೊಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ವೆಂಕಟೇಶ್ ಜೋಶಿ, ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ(ಸ್ವತಂತ್ರ ಹೊಣೆಗಾರಿಕೆ) ಶ್ರೀ ಹರ್ ದೀಪ್ ಸಿಂಗ್ ಪುರಿ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಮತ್ತಿತರರು ಭಾಗವಹಿಸಲಿದ್ದಾರೆ. ಕೇಂದ್ರ ಸಂಪುಟ ಸಚಿವರು, ರಾಜ್ಯ ಸಚಿವರು, ಸಂಸದರು, ಕಾರ್ಯದರ್ಶಿಗಳು, ರಾಯಭಾರಿಗಳು/ಹೈಕಮಿಷನರ್ ಗಳು ಸೇರಿದಂತೆ ಸುಮಾರು 200 ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ನೇರ ವೆಬ್ ಕಾಸ್ಟ್ ಮಾಡಲಾಗುವುದು.

***


(Release ID: 1679241) Visitor Counter : 275