ಪ್ರಧಾನ ಮಂತ್ರಿಯವರ ಕಛೇರಿ

ಡಿಸೆಂಬರ್ 25, ಪಿ ಎಂ - ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಬಿಡುಗಡೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

Posted On: 23 DEC 2020 3:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ಫಲಾನುಭವಿಗಳಿಗೆ ಮುಂದಿನ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದು, 9 ಕೋಟಿಗೂ ಅಧಿಕ ರೈತ ಕುಟುಂಬಗಳಿಗೆ 18 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಣವನ್ನು ವರ್ಗಾಯಿಸಲಿದ್ದಾರೆ.

ಇದೇ ವೇಳೆ ಪ್ರಧಾನಮಂತ್ರಿ ಅವರು, ಆರು ರಾಜ್ಯಗಳ ಆಯ್ದ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ರೈತರು ಪಿಎಂ-ಕಿಸಾನ್ ನಿಂದ ತಮಗಾಗಿರುವ ಪ್ರಯೋಜನಗಳ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಮತ್ತು ಸರ್ಕಾರ ಕೈಗೊಂಡಿರುವ ಇತರ ರೈತ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಮ್ಮ ಅನಿಸಿಕೆ ಹಂಚಿಕೊಳ್ಳುವರು. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವರು ಸಹ ಭಾಗವಹಿಸಲಿದ್ದಾರೆ.  

ಪಿಎಂ ಕಿಸಾನ್ ಕುರಿತು

ಪಿಎಂ-ಕಿಸಾನ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ  ಪ್ರತಿ ವರ್ಷ 6000 ರೂ. ಆರ್ಥಿಕ ನೆರವನ್ನು ನೀಡಲಾಗುವುದು. ಹಣವನ್ನು 4 ತಿಂಗಳಿಗೊಮ್ಮೆ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ ಪಾವತಿಸಲಾಗುವುದು. ನಿಧಿಯನ್ನು ನೇರವಾಗಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು.

***



(Release ID: 1682993) Visitor Counter : 285