ಸಂಪುಟ

ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಪರಿಷ್ಕೃತ ವಿಮಾನ ಸೇವಾ ಒಪ್ಪಂದಕ್ಕೆ ಸಂಪುಟದ  ಅನುಮೋದನೆ

Posted On: 23 DEC 2020 4:42PM by PIB Bengaluru

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಪರಿಷ್ಕೃತ ವಿಮಾನ ಸೇವೆಗಳ ಒಪ್ಪಂದಕ್ಕೆ ಸಹಿ ಹಾಕಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಪರಿಷ್ಕೃತ ವಾಯು ಸೇವೆಗಳ ಒಪ್ಪಂದವು ಉಭಯ ದೇಶಗಳ ನಡುವಿನ ನಾಗರಿಕ ವಿಮಾನ ಯಾನ ಸಂಬಂಧಗಳಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಮತ್ತು ಉಭಯ ದೇಶಗಳ ನಡುವೆ ಹೆಚ್ಚಿನ ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಸಾಮರ್ಥ್ಯವನ್ನು ಹೊಂದಿದ್ದು, ನಾಗರಿಕ ವಿಮಾನಯಾನ ಕ್ಷೇತ್ರದ ಬೆಳವಣಿಗೆಗಳಿಗೆ ಅನುಗುಣವಾಗಿದೆ. ಇದು ಹೆಚ್ಚಿನ ಭದ್ರತೆ ಮತ್ತು ಸುರಕ್ಷತೆಯ ಖಾತ್ರಿಯೊಂದಿಗೆ ಎರಡೂ ಕಡೆಯ ವಾಹಕಗಳಿಗೆ ವಾಣಿಜ್ಯ ಅವಕಾಶಗಳನ್ನು ನೀಡಲು ವರ್ಧಿತ ಮತ್ತು ತಡೆರಹಿತ ಸಂಪರ್ಕಕ ವ್ಯವಸ್ಥೆಯನ್ನು ಒದಗಿಸುತ್ತದೆ.

***



(Release ID: 1683170) Visitor Counter : 160