ಪ್ರಧಾನ ಮಂತ್ರಿಯವರ ಕಛೇರಿ
ಜನವರಿ 16 ರಂದು ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಪ್ರಧಾನಿಯವರ ಭಾಷಣ ಮತ್ತು ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ
Posted On:
14 JAN 2021 3:59PM by PIB Bengaluru
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 16 ರಂದು ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಪ್ರಾರಂಭ್: ಸ್ಟಾರ್ಟ್ಅಪ್ ಇಂಡಿಯಾ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಹಾಗೂ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆಯು 2021 ರ ಜನವರಿ 15-16 ರಂದು ಈ ಶೃಂಗಸಭೆಯನ್ನು ಆಯೋಜಿಸುತ್ತಿದೆ. 2018ರ ಆಗಸ್ಟ್ ನಲ್ಲಿ ಕಠ್ಮಂಡುವಿನಲ್ಲಿ ನಡೆದ ನಾಲ್ಕನೇ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರು ಮಾಡಿದ ಪ್ರಕಟಣೆಯ ಅನುಸಾರ ೆರಡು ದಿನಗಳ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ ಭಾರತವು ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್ಅಪ್ ಸಮಾವೇಶ ಆಯೋಜಿಸುವುದಾಗಿ ಹೇಳಿತ್ತು.
2016 ರ ಜನವರಿ 16 ರಂದು, ಪ್ರಧಾನ ಮಂತ್ರಿಯವರು ಚಾಲನೆ ನೀಡಿದ ಸ್ಟಾರ್ಟ್ಅಪ್ ಇಂಡಿಯಾ ಉಪಕ್ರಮದ ಐದನೇ ವಾರ್ಷಿಕೋತ್ಸವವನ್ನೂ ಈ ಶೃಂಗಸಭೆ ಸೂಚಿಸುತ್ತದೆ. 25 ಕ್ಕೂ ಹೆಚ್ಚು ದೇಶಗಳು ಮತ್ತು 200 ಕ್ಕೂ ಹೆಚ್ಚು ಭಾಷಣಕಾರರ ಭಾಗವಹಿಸುವಿಕೆಯೊಂದಿಗೆ, ಶೃಂಗಸಭೆಯು ಸ್ಟಾರ್ಟ್ಅಪ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದಾಗಿನಿಂದ ಭಾರತ ಸರ್ಕಾರ ಆಯೋಜಿಸುತ್ತಿರುವ ಅತಿದೊಡ್ಡ ಸ್ಟಾರ್ಟ್ಅಪ್ ಸಮಾವೇಶವಾಗಿದೆ. ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಗಳನ್ನು ಸಾಮೂಹಿಕವಾಗಿ ಅಭಿವೃದ್ಧಿಪಡಿಸಲು ಮತ್ತು ಬಲಪಡಿಸಲು ಜಗತ್ತಿನಾದ್ಯಂತದ ದೇಶಗಳೊಂದಿಗೆ ಬಹುಪಕ್ಷೀಯ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವ 24 ಅಧಿವೇಶನಗಳು ಶೃಂಗಸಭೆಯಲ್ಲಿ ನಡೆಯಲಿವೆ.
****
(Release ID: 1688564)
Visitor Counter : 236
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam