ಪ್ರಧಾನ ಮಂತ್ರಿಯವರ ಕಛೇರಿ
ಭಾರತರತ್ನ ಎಂಜಿಆರ್ ಅವರ ಜಯಂತಿ ಅಂಗವಾಗಿ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
17 JAN 2021 2:12PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಡಾ. ಎಂ.ಜಿ. ರಾಮಚಂದ್ರನ್ ಅವರ ಜಯಂತಿ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಎಂಜಿಆರ್ ಅವರು ಸಿನಿಮಾ ಪರದೆಯಿಂದ ರಾಜಕೀಯ ಪರದೆ ವರೆಗೆ ಜನರ ಹೃದಯವನ್ನು ಗೆದ್ದಿದ್ದರು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಕೆವಾಡಿಯಾಕ್ಕೆ ದೇಶದ ನಾನಾ ಭಾಗಗಳಿಂದ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರುನಿಶಾನೆ ತೋರಿ, ಗುಜರಾತ್ ನ ಹಲವು ರೈಲ್ವೆ ಯೋಜನೆಗಳನ್ನು ಉದ್ಘಾಟಿಸಿದ ನಂತರ ಮಾತನಾಡಿದರು.
ಕೆವಾಡಿಯಾಕ್ಕೆ ಆಗಮಿಸುವ ಒಂದು ರೈಲು ಪುರುಚಿ ತಲೈವಾರ್ ಡಾ. ಎಂ.ಜಿ. ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಭಾರತರತ್ನ ಎಂಜಿಆರ್ ಅವರ ಜನ್ಮವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು ಎಂದು ಹೇಳಿದರು. ಸಿನಿಮಾ ಕ್ಷೇತ್ರದಲ್ಲಿ ಮತ್ತು ರಾಜಕೀಯ ವೇದಿಕೆಯಲ್ಲಿ ಎಂಜಿಆರ್ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಶಂಸಿಸಿದರು. ಎಂಜಿಆರ್ ಅವರ ರಾಜಕೀಯ ಪಯಣ ಬಡವರಿಗಾಗಿ ಮೀಸಲಾಗಿತ್ತು ಮತ್ತು ಶೋಷಿತರು ಗೌರವಯುತ ಬಾಳ್ವೆ ನಡೆಸುವಂತಾಗಬೇಕು ಎಂದು ಅವರಿಗಾಗಿ ಅಹರ್ನಿಶಿ ದುಡಿದಿದ್ದರು ಎಂದು ಪ್ರಧಾನಮಂತ್ರಿ ಸ್ಮರಿಸಿದರು.
ನಾವೆಲ್ಲರೂ ಅವರ ಆದರ್ಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ, ಚೆನ್ನೈನ ಕೇಂದ್ರ ರೈಲು ನಿಲ್ದಾಣವನ್ನು ಎಂಜಿಆರ್ ನಿಲ್ದಾಣವನ್ನಾಗಿ ಮರು ನಾಮಕರಣ ಮಾಡಿದ್ದನ್ನು ಅವರು ನೆನಪು ಮಾಡಿಕೊಂಡರು.
****
(Release ID: 1689504)
Visitor Counter : 174
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam