ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದ ಜಲ್‌ಪೈಗುರಿಯ ಧುಪ್ಗುರಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ; ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ

Posted On: 20 JAN 2021 11:18AM by PIB Bengaluru

ಪಶ್ಚಿಮ ಬಂಗಾಳದ ಜಲ್‌ಪೈಗುರಿಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ಮೃತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ.

ಕುರಿತು ಪ್ರಧಾನ ಮಂತ್ರಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ. "ಪಶ್ಚಿಮ ಬಂಗಾಳದ ಜಲ್ಪೈಗುರಿ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾದುದು. ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ.”

ಪಶ್ಚಿಮ ಬಂಗಾಳದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದುಎಂದು ಪ್ರಧಾನಿಯವರು ಘೋಷಿಸಿದ್ದಾರೆ.

***


(Release ID: 1690349) Visitor Counter : 172