ಪ್ರಧಾನ ಮಂತ್ರಿಯವರ ಕಛೇರಿ
ಜನವರಿ 22, ವಾರಣಸಿಯ ಕೋವಿಡ್ ಲಸಿಕೆ ಫಲಾನುಭವಿಗಳು ಮತ್ತು ಲಸಿಕೆ ಹಾಕುವವರೊಂದಿಗೆ ಪ್ರಧಾನಮಂತ್ರಿ ಸಂವಾದ
प्रविष्टि तिथि:
21 JAN 2021 4:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಸಿಯ ಕೋವಿಡ್ ಲಸಿಕೆ ಫಲಾನುಭವಿಗಳು ಮತ್ತು ಲಸಿಕೆ ಹಾಕುವವರೊಂದಿಗೆ ಜನವರಿ 22, 2021 ರ ಮಧ್ಯಾಹ್ನ 1.15ಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಸಂವಾದದಲ್ಲಿ ಲಸಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಪ್ರಧಾನಮಂತ್ರಿ ಅವರೊಂದಿಗೆ ತಮ್ಮ ಮೊದಲ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮವನ್ನು ಸಕಾರಾತ್ಮಕ ಮತ್ತು ಸುಗಮವಾಗಿ ನಡೆಸುವ ಉದ್ದೇಶದಿಂದ ಪ್ರಧಾನಮಂತ್ರಿ ಅವರು ವಿಜ್ಞಾನಿಗಳು, ರಾಜಕೀಯ ನಾಯಕರು, ಅಧಿಕಾರಿಗಳು ಮತ್ತಿತರ ಪಾಲುದಾರರೊಂದಿಗೆ ನಿರಂತರ ಸಂವಾದ ಮತ್ತು ಚರ್ಚೆ ಮುಂದುವರೆಸಿದ್ದು, ಇದರ ಮುಂದುವರೆದ ಭಾಗವಾಗಿ ಇಂದು ಲಸಿಕೆ ಪಡೆದವರು ಮತ್ತು ಲಸಿಕೆ ಹಾಕುವವರೊಂದಿಗೆ ಸಂವಾದ ನಡೆಸಲಿದ್ದಾರೆ.
***
(रिलीज़ आईडी: 1691119)
आगंतुक पटल : 155
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam