ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ದೇಶದ ಹೆಣ್ಣು ಮಗಳಿಗೆ ವಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Posted On: 24 JAN 2021 12:18PM by PIB Bengaluru

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ದೇಶದ ಹೆಣ್ಣು ಮಕ್ಕಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವಂದಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಶ್ರೀ ನರೇಂದ್ರ ಮೋದಿ ಅವರು, “ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಇಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದೇಶದ ಹೆಣ್ಣು ಮಕ್ಕಳಿಗೆ [ದೇಶ್ ಕಿ ಬೇಟಿ] ವಂದಿಸುತ್ತೇನೆ.  ಹೆಣ್ಣು ಮಗುವನ್ನು ಸಬಲೀಕರಣಗೊಳಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಕೈಗೆಟುಕುವ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆ ಕಲ್ಪಿಸಿದೆ, ಉತ್ತಮ ಆರೋಗ್ಯ ಸೇವೆ ಮತ್ತು ಲಿಂಗಸಂವೇದನೆಯನ್ನು ಸುಧಾರಿಸುವ ಸುಧಾರಿಸುವ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ

****

 



(Release ID: 1691969) Visitor Counter : 200