ಪ್ರಧಾನ ಮಂತ್ರಿಯವರ ಕಛೇರಿ

ಜನವರಿ 25, ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

Posted On: 24 JAN 2021 3:27PM by PIB Bengaluru

ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 2021, 25 ರಂದು ಮಧ್ಯಾಹ್ನ 12 ಗಂಟೆಗೆ ಸಂವಾದ ನಡೆಸಲಿದ್ದಾರೆ.

ಸಂದರ್ಭದಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಸಹ ಉಪಸ್ಥಿತರಿರುವರು.

ಕ್ರೀಡೆ, ಕಲೆ ಸಂಸ್ಕೃತಿ, ಸಾಮಾಜಿಕ ಸೇವೆ, ಶೌರ್ಯ, ನಾವೀನ್ಯತೆ, ಅಸಧಾರಣ ಸಾಮರ್ಥ್ಯ ಸಮಗ್ರ ಮತ್ತು ಅತ್ಯುತ್ತಮ ಸಾಧನೆ ಮಾಡಿರುವವರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಕಾರ್ಯಕ್ರಮದಡಿ ಬಾಲ ಶಕ್ತಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ವರ್ಷ ಪಿ.ಎಂ.ಆರ್.ಬಿ.ಪಿ -2021 ಸಾಲಿನ ಪ್ರಶಸ್ತಿಗಾಗಿ ದೇಶದ ವಿವಿಧ ವಿಭಾಗಗಳಿಂದ 32 ಮಂದಿಯನ್ನು ಬಾಲಶಕ್ತಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ

***(Release ID: 1692114) Visitor Counter : 168