ಪ್ರಧಾನ ಮಂತ್ರಿಯವರ ಕಛೇರಿ
ಜನವರಿ 28, ಕಾರಿಯಪ್ಪ ಮೈದಾನದಲ್ಲಿ ಎನ್‌ಸಿಸಿ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ
Posted On:
27 JAN 2021 4:34PM by PIB Bengaluru
2021 ರ ಜನವರಿ 28 ರಂದು ದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆಯಲಿರುವ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ಸಶಸ್ತ್ರ ಸೇನಾ ಪಡೆಗಳ ಮೂವರೂ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.
ಪ್ರಧಾನ ಮಂತ್ರಿಯವರು ಗೌರವ ವಂದನೆ, ಎನ್‌ಸಿಸಿ ದಳಗಳ ಪರೇಡ್ ಪರಿಶೀಲಿಸುತ್ತಾರೆ ಮತ್ತು ಸಂಜೆ ನಡೆಯುವ ಸಾಂಸ್ಕೃತಿಕ ಪ್ರದರ್ಶನಕ್ಕೆ ಸಾಕ್ಷಿಯಾಗಲಿದ್ದಾರೆ.
***
(Release ID: 1692675)
Visitor Counter : 180
Read this release in:
Assamese
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam