ಪ್ರಧಾನ ಮಂತ್ರಿಯವರ ಕಛೇರಿ
ಮೊರದಾಬಾದ್ ರಸ್ತೆ ದುರಂತದ ಸಂತ್ರಸ್ಥರಿಗೆ ಪರಿಹಾರ (ಎಕ್ಸ್ ಗ್ರೆಷಿಯಾ)ಕ್ಕೆ ಪ್ರಧಾನ ಮಂತ್ರಿ ಸಮ್ಮತಿ
प्रविष्टि तिथि:
31 JAN 2021 4:19PM by PIB Bengaluru
ಉತ್ತರ ಪ್ರದೇಶದ ಮೊರದಾಬಾದಿನಲ್ಲಿ ಸಂಭವಿಸಿದ ರಸ್ತೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ (ಎಕ್ಸ್ ಗ್ರೇಷಿಯಾ) ನ್ನು ಪ್ರಧಾನ ಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲು ಪ್ರಧಾನ ಮಂತ್ರಿ ಅವರು ಅನುಮೋದನೆ ನೀಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಕ್ಕೂ ಅನುಮೋದನೆ ನೀಡಲಾಗಿದೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್‌ನಲ್ಲಿ, “ಉತ್ತರ ಪ್ರದೇಶದ ಮೊರದಾಬಾದಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳ ಸದಸ್ಯರಿಗೆ ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ”. ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ. ಗಳನ್ನು ನೀಡಲಾಗುವುದು ಎಂದು ತಿಳಿಸಿದೆ.
***
(रिलीज़ आईडी: 1694370)
आगंतुक पटल : 189
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam